Mahalakshmi Murder Case: Mahalakshmi murder suspect surrenders to suicide
Bengaluru: ಬೆಂಗಳೂರಿನ ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರಲ್ಲಿ ಇದೇ ತಿಂಗಳ 21ರಂದು ಫ್ರಿಡ್ಜ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ (Bengaluru Mahalaxmi Murder Case) ಮಾಡಿ ಇಡಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ವೈಯಾಲಿಕಾವಲ್ (Vayyalikaval) ಪೊಲೀಸರು ಈ ಪ್ರಕರಣ ಕೈಗೆತ್ತಿಕೊಂಡು ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದರು. ಆದರೆ ಆರೋಪಿಯ ಪತ್ತೆ ಮಾಡಲು ಹೊರ ರಾಜ್ಯಕ್ಕೆ ಹೋದ ಪೊಲೀಸರಿಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಜೊತೆಗೆ ಡೆತ್ ನೋಟ್ ಪತ್ತೆಯಾಗಿದ್ದು, ಈ ಡೆತ್ ನೋಟ್ನಲ್ಲಿ (Death Note) ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆ ಮೃತ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ.
ಮಹಾಲಕ್ಷ್ಮಿ ಕೊಲೆ ಬೆಳಕಿಗೆ ಬಂದ ಮೇಲೆ ಬೆಂಗಳೂರು (Bengaluru) ಪೊಲೀಸರು ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದರು. ನರಹಂತಕ ಯಾವುದೇ ಮೂಲೆಯಲ್ಲಿದ್ರೂ ಬಂಧಿಸಲು ಹೊರಟಿದ್ದರು. ಆದ್ರೆ ಆತ ಪೊಲೀಸರ ಕೈಗೆ ಸಿಕ್ಕಿದ್ದು ಮಾತ್ರ ಶವವಾಗಿ. ಈತನೇ ಮಹಾಲಕ್ಷ್ಮೀಯನ್ನ ಕೊಚ್ಚಿ ಕೊಲೆ ಮಾಡಿರೋದು ರಿವೀಲ್ ಆಗಿದೆ.
ಡೆತ್ ನೋಟ್ನಲ್ಲೇನಿದೆ?
ಸೆಪ್ಟಂಬರ್ (September) 3ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಮಹಾಲಕ್ಷ್ಮೀ ಹತ್ಯೆ ಕುರಿತು ರಂಜನ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ಸೆಪ್ಟೆಂಬರ್ 3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದಾಗಿ ಬರೆದಿದ್ದಾನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ನಲ್ಲಿ (Fridge) ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ ನೋಟ್ನಲ್ಲಿ(Deathnote) ಕೊಲೆ ಮಾಡಲು ಕಾರಣವೇನೆಂಬುದನ್ನು ರಂಜನ್ ಬಹಿರಂಗಪಡಿಸಿದ್ದಾನೆ.