ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಇಲ್ಲಿಯವರೆಗೂ 77 ಅಪಘಾತಗಳು ವರದಿ : ಪೊಲೀಸ್ ಇಲಾಖೆ

Bengaluru : ಹಿಂದೂಸ್ಥಾನ್‌ ಟೈಮ್ಸ್‌ ಪತ್ರಿಕೆಯ ವರದಿ ಅನುಸಾರ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bangalore Mysore Expressway Accidents) ರಸ್ತೆಯಲ್ಲಿ ಕಳೆದ ಆರು ತಿಂಗಳಲ್ಲಿ 77 ಅಪಘಾತಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆಯ ಅಂಕಿ ಅಂಶಗಳು ತಮ್ಮ ವರದಿಯಲ್ಲಿ ತಿಳಿಸಿವೆ.

ಪೊಲೀಸ್‌ ಇಲಾಖೆ ನೀಡಿರುವ ಅಧಿಕೃತ ಮಾಹಿತಿ ಅನುಸಾರ, ರಾಮನಗರ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತಗಳು ವರದಿಯಾಗಿದ್ದು, ಒಟ್ಟು 28 ಜನರು ಸಾವನ್ನಪ್ಪಿದ್ದಾರೆ ಮತ್ತು 67 ಜನರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.

8,453 ಕೋಟಿ ರೂ. ವೆಚ್ಚದ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಯಾಗಲಿದೆಯಾದರೂ,

ಉಳಿದ ಭಾಗವು ಇನ್ನೂ ಪೂರ್ಣಗೊಳ್ಳದ ಕಾರಣ ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳ ಓಡಾಟ ನಡೆಸಲು ರಾಷ್ಟ್ರೀಯ ಹೆದ್ದಾರಿ NHAI (National Highway) ಅಧಿಕಾರಿಗಳು ಅನುಮತಿ ನೀಡಿದ್ದಾರೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯಿಂದ ಯೋಜನೆ ಮಂಜೂರು ಮಾಡುವಲ್ಲಿ ಕೊಡಗು-ಮೈಸೂರು ಸಂಸದರಾದ ಪ್ರತಾಪ್ (Prathap sinha) ಸಿಂಹ ಪ್ರಮುಖ ಪಾತ್ರ ವಹಿಸಿದ್ದಾರೆ.

ಇದನ್ನೂ ಓದಿ: https://vijayatimes.com/messi-gave-special-gift/

ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುನ್ನವೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.

ಎನ್‌ಎಚ್‌ಎಐ ಅಧಿಕಾರಿಗಳ ಪ್ರಕಾರ, ಎಕ್ಸ್‌ಪ್ರೆಸ್‌ವೇಯಲ್ಲಿ 16 ಅಪಘಾತ ವಲಯಗಳಿವೆ, ಆದರೆ ಅಧಿಕಾರಿಗಳು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ ಎಂಬುದು ಗಮನಾರ್ಹ!

“ಹೊಸ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಹೆಚ್ಚಳವನ್ನು ನಾವು ಗಮನಿಸಿದ್ದೇವೆ. ಅಪಘಾತಗಳನ್ನು ಕಡಿಮೆ ಮಾಡಲು ನಾವು 13 ಅಂಶಗಳ ಸಲಹೆಗಳನ್ನು ಎನ್‌ಎಚ್‌ಎಐ ಅಧಿಕಾರಿಗಳಿಗೆ ಕಳುಹಿಸಿದ್ದೇವೆ ಎಂದು ರಾಮನಗರ ಎಸ್‌.ಪಿ ಕೆ ಸಂತೋಷ್ ಬಾಬು ತಿಳಿಸಿದ್ದಾರೆ.

ಚಾಲಕರ ನಿರ್ಲಕ್ಷ್ಯದಿಂದಲೇ ಎಲ್ಲ ಅಪಘಾತಗಳು ಸಂಭವಿಸಿವೆ ಎಂದು ಹೇಳಿದರು. ಈ ಮಧ್ಯೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಪ್ರತಿ 500 ಮೀಟರ್‌ಗೆ ಸಿಸಿಟಿವಿ ಸರಿಪಡಿಸಲು ಮತ್ತು ಸೈನ್‌ಬೋರ್ಡ್‌ಗಳು ಮತ್ತು ವೇಗ ಮಿತಿಗಳನ್ನು ಅಳವಡಿಸಲು ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿ: https://vijayatimes.com/weight-loss-tips/

ಅಪಘಾತಗಳಿಗೆ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣ. NHAI ಮಾರ್ಗಸೂಚಿಗಳ ಪ್ರಕಾರ, ಎಕ್ಸ್‌ಪ್ರೆಸ್‌ವೇಯಲ್ಲಿ ಗರಿಷ್ಠ ವೇಗವು ಪ್ರತಿ ಗಂಟೆಗೆ 100 KMPH ಗೆ ಸೀಮಿತವಾಗಿದೆ ಎಂದು NHAI ಯೋಜನಾ ನಿರ್ದೇಶಕ ಬಿ. ಶ್ರೀಧರ್ ಮಾಹಿತಿ ನೀಡಿದ್ದಾರೆ.

ಅಪಘಾತಗಳಲ್ಲಿ ಅತೀ ವೇಗವೇ ಸಾವಿಗೆ ಕಾರಣವೆಂಬುದು ಪೊಲೀಸರ ಹೇಳಿಕೆ! ಅನೇಕ ಜನರು ಗಂಟೆಗೆ 140-160 ಕಿಲೋಮೀಟರ್ ವೇಗದಲ್ಲಿ ವಾಹನಗಳನ್ನು ಓಡಿಸುವುದನ್ನು ನಾವು ಗಮನಿಸಿದ್ದೇವೆ. ಇದು ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ.

ಎಕ್ಸ್‌ಪ್ರೆಸ್‌ವೇ ಪೂರ್ಣಗೊಂಡ ನಂತರ ಪೊಲೀಸರು ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಾರೆ, ಇದು ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ರಸ್ತೆ ನಿರ್ಮಾಣ ಸಂಪೂರ್ಣ ವೈಜ್ಞಾನಿಕವಾಗಿದ್ದು,

ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೂ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೂ ಸಂಬಂಧವಿಲ್ಲ. ನಾವು ಸಂಪೂರ್ಣ ಪರೀಕ್ಷೆಯ ನಂತರವೇ ವಾಹನಗಳನ್ನು ಅನುಮತಿಸಿದ್ದೇವೆ ಎಂದು ಹೇಳಿದರು.

Exit mobile version