ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಪರಿಶೀಲನೆ; ರಾಜಧಾನಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ

New Delhi : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Bangalore Mysore Expressway) ಅವರು ಜನವರಿ 5 ರಂದು ರಾಜ್ಯ ರಾಜಧಾನಿಗೆ ಭೇಟಿ ನೀಡಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಪಥವನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಬುಧವಾರ ಮಾಹಿತಿ ನೀಡಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವ ಸಿಸಿ ಪಾಟೀಲ್ ಅವರು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಯಲ್ಲಿನ ಅತಿಯಾದ (Bangalore Mysore Expressway) ವೇಗ, ಅಪಘಾತದ ಬಗ್ಗೆಯೂ ಮಾತನಾಡಿದರು.

ಜನತಾದಳ (ಜಾತ್ಯತೀತ) ಎಂಎಲ್ಸಿ (MLC) ಮರಿತಿಬ್ಬೇಗೌಡ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಾಟೀಲ್, ರಾಜ್ಯದಲ್ಲಿ ಈ ವರ್ಷ ಹಿಂದಿನ ವರ್ಷಕ್ಕಿಂತ ಹೆಚ್ಚು ಮಳೆಯಾಗಿದ್ದು, ನೀರಿನ ಹರಿವು ಹೆಚ್ಚಾಗಿದೆ.

ಅತಿಕ್ರಮಣ ಮತ್ತು ಸೀಳು ಕೂಡ ಎಕ್ಸ್‌ಪ್ರೆಸ್‌ ವೇ ಯ ಕೆಲವು ಭಾಗಗಳಲ್ಲಿನ ಹಾನಿಗೆ ಕಾರಣವಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್‌ಪ್ರೆಸ್‌ ವೇ ಮಾರ್ಗದಲ್ಲಿ ಒಟ್ಟು 77 ಅಪಘಾತಗಳ ಸಂಖ್ಯೆ ವರದಿಯಾಗಿದ್ದು, ಪೊಲೀಸ್‌ ಇಲಾಖೆಯ ವತಿಯಿಂದ ಇದು ದೃಢವಾಗಿದೆ.

ಪೊಲೀಸ್ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಳೆದ ಆರು ತಿಂಗಳಲ್ಲಿ 77 ಅಪಘಾತಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ : https://vijayatimes.com/rishabh-pant-car-accident/

ವರದಿಯಾದ ಅಪಘಾತಗಳಲ್ಲಿ, ಒಟ್ಟು 28 ಜನರು ಪ್ರಾಣ ಕಳೆದುಕೊಂಡರೆ, 67 ಜನರು ಗಂಭೀರ ಗಾಯಗೊಂಡಿದ್ದಾರೆ.

ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗಳಿಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ರೂ. 8,453 ಕೋಟಿ ವೆಚ್ಚದ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ಆದಾಗ್ಯೂ, NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಓಡಿಸಲು ಅನುಮತಿ ನೀಡಿತು, ಏಕೆಂದರೆ ಉಳಿದ ಮಾರ್ಗವು ಇನ್ನೂ ಪೂರ್ಣಗೊಂಡಿಲ್ಲ. ರಸ್ತೆಯು 118 ಕಿಲೋ ಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಯ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Exit mobile version