ಬೆಂಗಳೂರಿನ ರಾಮಕೃಷ್ಣಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ

ಬೆಂಗಳೂರು, ಜ. 12: ಪ್ರತಿಷ್ಠಿತ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ವಿಧಿವಶರಾಗಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಹರ್ಷಾನಂದ ಅವರು ಇಂದು ಮಧ್ಯಾಹ್ನ 1:05ರ ವೇಳೆ ಹೃದಯಾಘಾತದಿಂದ ನಿಧನರಾದರು.

ಸ್ವಾಮಿ ವಿವೇಕಾನಂದರ‌ ಅಪ್ಪಟ ಅನುಯಾಯಿಯಾಗಿದ್ದ ಸ್ವಾಮಿ ಹರ್ಷಾನಂದ ಅವರು ವಿವೇಕಾನಂದರ ಜನ್ಮದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಶ್ರೀ ರಾಮಕೃಷ್ಣ ವಿದ್ಯಾರ್ಥಿ ಮಂದಿರದಲ್ಲಿ ಮೃತರ ಅಂತಿಮ ‌ದರ್ಶನಕ್ಕೆ‌ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯಕ್ರಿಯೆ ಜ.13ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ರಾಮಕೃಷ್ಣ ಮಠದ ಮೂಲಗಳು ತಿಳಿಸಿವೆ.

ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಕೆ.ಸುಧಾಕರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Exit mobile version