ಬ್ಯಾಂಕ್ ಮ್ಯಾನೇಜರನ್ನು ಗುಂಡಿಕ್ಕಿ ಹತ್ಯೆ ; ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಮುಂದುವರಿಕೆ!

Jammu kashmir

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ(Kulgam) ರಾಜಸ್ಥಾನದ(Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಅರೆಯಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್‌ನಲ್ಲಿ(Ellaquai Dehati Bank) ಕೆಲಸ ಮಾಡುವ ವಿಜಯ್ ಕುಮಾರ್(Vijay Kumar) ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು(Terrorists) ಗುಂಡು ಹಾರಿಸಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ಕುಮಾರ್ ಅವರನ್ನು ಆಸ್ಪತ್ರೆಗೆ ಕೂಡಲೇ ಕರೆದೊಯ್ಯಲಾಯಿತು, ಆದರೆ ದಾರಿ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನಿಂದ ಕೇವಲ 13 ಕಿ.ಮೀ ದೂರದಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಾರ ಬೆಳಗ್ಗೆ ಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಹಿಂದೂ ಮಹಿಳೆಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಎರಡು ದಿನಗಳ ಬೆನ್ನಲ್ಲೇ ಈ ಘಟನೆ ನಡೆದಿದೆ. ರಜನಿ ಬಾಲಾ ಹತ್ಯೆಯಾದ ಮಹಿಳೆ, ಶಾಲಾ ಶಿಕ್ಷಕಿ ಎಂದು ಪೊಲೀಸರು ತಿಳಿಸಿದ್ದರು. ಅವರು ತಮ್ಮ ಪತಿ ಮತ್ತು ಮಗಳೊಂದಿಗೆ ಜಮ್ಮು ವಿಭಾಗದ ಸಾಂಬಾದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕುಮಾರ್ ಹತ್ಯೆಯು ಕಾಶ್ಮೀರದಲ್ಲಿ ನಡೆದ ಉದ್ದೇಶಿತ ಹತ್ಯೆಗಳ ಸರಣಿಯಲ್ಲಿ ಇತ್ತೀಚಿನದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ವಾರ, ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಟಿವಿ ಕಲಾವಿದೆ ಅಮ್ರೀನ್ ಭಟ್(Amrin Bhat) ಸಾವನ್ನಪ್ಪಿದ್ದರು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್(Rahul Bhat) ಅವರನ್ನು ಉಗ್ರರು ಗುರಿಯಾಗಿಸಿ ಹತ್ಯೆ ಮಾಡಿದ್ದರು ಎಂದು ಹೇಳಲಾಗಿದೆ.

Exit mobile version