- ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಸಮರ ಸಾರಿದ ಡಿಸಿಎಂ (banners and flexes are removed)
- ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನ ಕೂಡಲೇ ತೆರವುಗೊಳಿಸಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ
- ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬೇಡಿ ಎಂದ ಡಿಕೆಶಿ
Bengaluru: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಫ್ಲೆಕ್ಸ್, ಬ್ಯಾನರ್ (Flex, banner) ಮೇಲೆ ಡಿಸಿಎಂ ಡಿಕೆ ಶಿವಕುಮಾರ (DCM DK Shivakumar) ಅವರು ಕಿಡಿ ಕಾರಿದ್ದಾರೆ.ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ (Palace grounds) ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಗೆ (BBMP) ಸೂಚನೆ ನೀಡಿದ್ದಾರೆ.
ಮಾರ್ಚ್ 17 ರಂದು ಸೋಮವಾರ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ (Congress) ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನ ಕೂಡಲೇ ತೆರವುಗೊಳಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ (BBMP Commissioner) ಸೂಚನೆ ನೀಡಿದರು.

ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು, ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ (Fine) ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ.
ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ನಗರದ ಸೌಂದರ್ಯ ಹಾಳು ಮಾಡುವುದಲ್ಲ ಎಂದಿದ್ದಾರೆ.ನೀಡಿದ ಗಡುವಿನ ಒಳಗೆ ಒಂದೊಮ್ಮೆ ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಕೆಳಗಿಳಿಯುತ್ತೇನೆ, ಕಾಯುತ್ತಿರಿ : ಹೊಸ ಸಂಚಲನ ಮೂಡಿಸಿರುವ ಡಿ. ಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು ನಗರದ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಆದೇಶವನ್ನು ಪದೇ ಪದೆ ನಿರ್ಲಕ್ಷಿಸಲಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಆದೇಶ ಉಲ್ಲಂಘಿಸಿರುವವರು ನಮ್ಮ ಪಕ್ಷದವರಾದರೂ ಸರಿ, ಬೇರೆ ಪಕ್ಷದವರಾದರೂ ಸರಿ ಅಂತಹವರ (banners and flexes are removed) ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿರುವುದಾಗಿ ಡಿಸಿಎಂ ತಿಳಿಸಿದ್ದಾರೆ. ಇನ್ನು ಇವರ ಈ ಹೇಳಿಕೆಯಿಂದಾಗಿ ಪರಿಸರವಾದಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.