Visit Channel

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಬೊಮ್ಮಾಯಿ ಘೋಷಣೆ

mYqKAn6RCL65SSs2U3muiE

ಬೆಂಗಳೂರು ಆ 23 : ಈ ಸಾಲಿನಿಂದ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬೊಮ್ಮಾಯಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ವಿತರಿಸುವುದಾಗಿ ಸಿಎಂ ಹೇಳಿದರು. ಕೊರೊನಾ ಸಂಕಷ್ಟದಿಂದ ಸರ್ಕಾರಕ್ಕೆ ಆರ್ಥಿಕ ಸಮಸ್ಯೆ ಇದೆ. ಆದರೆ ಹೊಸ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಆಗಸ್ಟ್‌ 23 ರಂದು ರಾಷ್ಟ್ರೀಯ ಶಿಕ್ಷಣ ನೀತಿ ದಿನಾಚರಣೆ ಆಗಲಿದೆ. ಪ್ರಸ್ತುತ ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ ಆಗಸ್ಟ್‌ 23 ರಂದು ರಾಷ್ಟ್ರೀಯ ಶಿಕ್ಷಣ ನೀತಿ ದಿನಾಚರಣೆ ಆಗಲಿದೆ. ನರೇಂದ್ರ ಮೋದಿ ದೂರದೃಷ್ಟಿ ಇರುವ ನಾಯಕ ಅವರ ದೂರದೃಷ್ಟಿಯ ಫಲ ಈ ರಾಷ್ಟ್ರೀಯ ಶಿಕ್ಷಣ ನೀತಿ ಎಂದು ಅವರು ತಿಳಿಸಿದರು

ಶಾಲಾರಂಭದ ಬಗ್ಗೆ ಮಾತನಾಡಿದ ಅವರ ಇಂದಿನಿಂದ ಭೌದಿಕ ತರಗತಿಗಳು ಆರಂಭವಾಗಿದ್ದು ಕೊರೊನಾದ ಮುನ್ನೆಚ್ಚರಿಕೆಯೊಂದಿಗೆ ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Latest News

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.