Bengaluru / New Delhi, (ಆಗಸ್ಟ್ 07): ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai Delhi Tour)
ಅವರು ಇಂದು ದೆಹಲಿಯಲ್ಲಿ (Delhi) ಹೈಕಮಾಂಡ್ಗೆ ಚೊಚ್ಚಲ ಭೇಟಿ ನೀಡಿದ್ದಾರೆ. ಭಾನುವಾರ ಸಂಜೆ ಬೆಂಗಳೂರಿನ (Bengaluru) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ
ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದಾರೆ . ಇಂದು ಅವರು ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಬೊಮ್ಮಾಯಿ ಅವರ ಈ ಭೇಟಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ
ನಾಯಕರ ಆಯ್ಕೆ ವಿಚಾರದಲ್ಲಿ ಮಹತ್ವದ ಜಿಜ್ಞಾಸೆಯನ್ನು (Basavaraj Bommai Delhi Tour) ಹುಟ್ಟುಹಾಕಿದೆ.

ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಈಗಾಗಲೇ ಹೈಕಮಾಂಡ್ ಮಾಡಿದೆ. ಇನ್ನುಳಿದ ನಾಯಕರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಹೈಕಮಾಂಡ್
ಸಿಟಿ ರವಿಯನ್ನು ದೆಹಲಿಗೆ ಕರೆಸಿ ವಿಸ್ತೃತ ಚರ್ಚೆ ನಡೆಸಿದೆ. ಕರ್ನಾಟಕ (Karnataka) ಬಿಜೆಪಿ ಅಧ್ಯಕ್ಷರಾಗಿ ಸಿಟಿ ರವಿ ಅವರ ನೇಮಕ ಬಹುತೇಕ ಅಂತಿಮಗೊಂಡಿದ್ದು, ಹೈಕಮಾಂಡ್ನಿಂದ ಅಧಿಕೃತ ಘೋಷಣೆ
ಬಾಕಿ ಇದೆ ಎಂದು ಮೂಲಗಳು ಸೂಚಿಸುತ್ತವೆ.
ಇದನ್ನೂ ಓದಿ : ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು : ಆಹಾರ ಮತ್ತು ನಾಗರಿಕ ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಇದಾದ ಬಳಿಕ ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್ ಚರ್ಚೆ ಆರಂಭಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ (Basana Gowda Patil Yathnal) ಮತ್ತು ಬಸವರಾಜ ಬೊಮ್ಮಾಯಿ ಅವರ ಹೆಸರು ಪ್ರಬಲ
ಆಕಾಂಕ್ಷಿಗಳಾಗಿ ಹೊರಹೊಮ್ಮಿದ್ದು, ಸೂಕ್ತ ಅಭ್ಯರ್ಥಿಯನ್ನು ನಿರ್ಧರಿಸಲು ಕೂಲಂಕಷ ಚರ್ಚೆ ನಡೆಯುತ್ತಿದೆ. ಈ ನಡುವೆ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ ಸುದ್ದಿ ಸಾಕಷ್ಟು ಸಂಚಲನ ಮೂಡಿಸಿದೆ.

ಆಪ್ತ ಮೂಲಗಳ ಪ್ರಕಾರ ಬಸವರಾಜ್ ಬೊಮ್ಮಾಯಿ ವರಿಷ್ಠರ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಅವರನ್ನು ಇಂದು ಮೊದಲಿಗೆ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ನಂತರ ವಿಪಕ್ಷ ನಾಯಕನ ಆಯ್ಕೆ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(J.P Nadda) ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸದ್ಯ ರಾಜ್ಯದಲ್ಲಿ ರಾಜಕೀಯ ವಿದ್ಯಾಮನಗಳ
ಬಗ್ಗೆ ಮತ್ತು ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧ ಅಮಿತ್ ಶಾ ಹಾಗೂ ನಡ್ಡಾ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗೆ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಆಯ್ಕೆ ಚರ್ಚೆ ಮಧ್ಯೆ ತೆರಳಿದ್ದು, ರಾಜ್ಯ ಬಿಜೆಪಿಯಲ್ಲಿ ಇದೀಗ ಸಂಚಲನ ಮೂಡಿಸಿದೆ.
ಅಲ್ಲದೆ ವಿಪಕ್ಷ ನಾಯಕನ ಸ್ಥಾನ ಯಾರಿಗೆ ಒಳಿಯಲಿದೆ ಎನ್ನುವ ಕುತೂಹಲ ಮೂಡಿಸಿದೆ.
ರಶ್ಮಿತಾ ಅನೀಶ್