ನಾಳೆ ದೆಹಲಿಗೆ ಬೊಮ್ಮಾಯಿ, ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ?

chief minister

ಬೆಂಗಳೂರು ಫೆ 2 : ಸಚಿವ ಸಂಪುಟಕ್ಕೆ ಸಂಬಂಧಿಸಿದಂತೆ ಖಾತೆಗಳನ್ನು ಹಂಚಿಕೆ ಮಾಡಲು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಜಲ ವಿವಾದಗಳ ಕುರಿತು ಚರ್ಚಿಸಲು ಕರ್ನಾಟಕದ ಸಂಸದರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ವಕೀಲರೊಂದಿಗೆ ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಸಿಎಂ ರಾಜ್ಯದ ಎಲ್ಲ ಸಂಸದರೊಂದಿಗೆ ಸಭೆ ನಡೆಸುವ ಸಂಪ್ರದಾಯವಿದೆ. ಅದಕ್ಕಾಗಿ ಇಂದು ಸಮಯವನ್ನು ನಿಗದಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.


ಈ ಸುದ್ದಿ ತಿಳಿಯುತ್ತದ್ದಂತೆ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಸದರ ಭೇಟಿ ನಂತರ ಮುಖ್ಯಮಂತ್ರಿಗಳು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಸಚಿವಕಾಂಕ್ಷಿಗಳು ಮುಖ್ಯಮಂತ್ರಿ ಹಾಗೂ ರಾಜ್ಯಧ್ಯಕ್ಷರ ಬಳಿ ದುಂಬಾಲು ಬಿದ್ದು ತಮ್ಮ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಆಕಾಂಕ್ಷಿಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

Exit mobile version