ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ – ಸಿಎಂ

 ಬೆಂಗಳೂರು(ಸೆ.15): ಸಾಕಷ್ಟು  ಪೋಷಕರಿಗೆ ಖಾಸಗಿ ಶಾಲೆಯ ಮೇಲೆ ವ್ಯಾಮೋಹ ವಿದ್ದು ಆ ವ್ಯಾಮೋಹ ಬಿಟ್ಟು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಗೊಳಿಸುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅಗ್ರಹಾರ ದಾಸರಹಳ್ಳಿ ವಾರ್ಡ್‌ನಲ್ಲಿ ಹೊಸದಾಗಿ ನವೀಕರಣಗೊಂಡ ಹೈಟೆಕ್‌ ಹಾಗೂ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದವರು. ಸರ್ಕಾರಿ ಶಾಲೆ ಪುನರ್ ನಿರ್ಮಾಣಗೊಂಡು ವಿದ್ಯಾರ್ಜನೆಗೆ ಅನುಕೂಲಕರವಾಗಿದೆ. ಅಗ್ರಹಾರ ದಾಸರಹಳ್ಳಿಯಲ್ಲಿ ಹೈಟೆಕ್‌ ಪ್ರೌಢಶಾಲೆಯನ್ನು ನವೀಕರಣ ಮಾಡಿ ಪದವಿ ಪೂರ್ವ ಕಾಲೇಜನ್ನು ಸ್ಥಾಪಿಸಿರುವುದು ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಸಾರ್ವಜನಿಕ ಸೇವೆ ಒದಗಿಸುವುದು ಕಷ್ಟದ ಕೆಲಸ. ಈ ನಡುವೆಯೂ ಸಚಿವರು ಇತರರಿಗೆ ಮಾದರಿ ಆಗುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವಿ. ಸೋಮಣ್ಣ ಅವರನ್ನು ಈ ಸಂಧರ್ಭದಲ್ಲಿ ಸಿಎಂ ಅಭಿನಂದಿಸಿದರು.

ಬಡವರ ಮಕ್ಕಳು ಖಾಸಗಿ ಶಾಲೆಗಳಲ್ಲಿನ ಶುಲ್ಕ ಪಾವತಿಸಲಾಗದ ಪರಿಸ್ಥಿತಿ ಇದೆ. ಅಂತಹ ಬಡ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆ ತಂದು ಉನ್ನತ ಶಿಕ್ಷಣ ನೀಡುವ ಜವಾಬ್ದಾರಿ ಸರ್ಕಾರಿ ಶಾಲೆಯ ಶಿಕ್ಷಕರ ಮೇಲಿದೆ.ನವೀಕರಣಗೊಂಡು ಉದ್ಘಾಟನೆಗೊಂಡ ಸುಸಜ್ಜಿತ ಪ್ರೌಢಶಾಲೆಯಲ್ಲಿ ಮೊದಲು ನೂರರಿಂದ ಇನ್ನೂರು ಮಕ್ಕಳು ದಾಖಲಾತಿ ಆಗುತ್ತಿತ್ತು. ಇದೀಗ 1300ಕ್ಕೂ ಹೆಚ್ಚು ಮಕ್ಕಳು ಶಾಲೆಯಲ್ಲಿ ಓದುತ್ತಿದ್ದಾರೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.

Exit mobile version