ಕೇಂದ್ರ ಸರ್ಕಾರ ಮಹಾ ಸರ್ಕಾರವನ್ನು ವಜಾಗೊಳಿಸಬೇಕು, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ

Bengaluru : ಮಹಾರಾಷ್ಟ್ರ (Maharashtra) ಸರ್ಕಾರ ಮತ್ತು ಕರ್ನಾಟಕ ಸರ್ಕಾರ (State Govt) ನಡುವೆ ನಡೆಯುತ್ತಿರುವ ಗಡಿ ಸಮಸ್ಯೆ ಇದೀಗ ತಾರಕಕ್ಕೆ ಏರುತ್ತಿದ್ದು,

ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)ಅವರು ಕೇಂದ್ರ ಸರ್ಕಾರ ಮಹಾ ಸರ್ಕಾರವನ್ನು ವಜಾಗೊಳಿಸಬೇಕು, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರವು ಕರ್ನಾಟಕದ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತಿದ್ದು, ಕೇಂದ್ರ ಸರ್ಕಾರವು (Central Govt)

ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕರ್ನಾಟಕದ ಹಿತ ಕಾಪಾಡುವಲ್ಲಿ ವಿಫಲರಾಗಿರುವ ಸಿಎಂ ಬೊಮ್ಮಾಯಿ (Basavaraj bommai) ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಕ್ಷಣೆಯಲ್ಲಿ ವಿಫಲರಾಗಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ 865 ಹಳ್ಳಿಗಳ ಜನರಿಗೆ ಮಹಾರಾಷ್ಟ್ರ ಸರಕಾರ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುತ್ತಿರುವುದು ಅಕ್ಷಮ್ಯ,

ಒಕ್ಕೂಟ ವ್ಯವಸ್ಥೆ ಹಾಗೂ ರಾಜ್ಯದ ಸಾರ್ವಭೌಮತೆಗೆ ಧಕ್ಕೆ ತಂದಿದೆ. ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಅಲ್ಲಿನ ರಾಜ್ಯ ಸರಕಾರವನ್ನು (basavaraj Vs siddaramaiah) ವಜಾಗೊಳಿಸಬೇಕು.

ಇದನ್ನೂ ಓದಿ : https://vijayatimes.com/nikhil-kumaraswamy-statement/

ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಒಂದು ಕ್ಷಣವೂ ಮುಖ್ಯಮಂತ್ರಿಯಾಗಿ (basavaraj Vs siddaramaiah) ಮುಂದುವರಿಯಲು ಅವರಿಗೆ ಅಧಿಕಾರವಿಲ್ಲ!

ಹೀಗಾಗಿ ಅವರ ರಾಜೀನಾಮೆಗೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು.

https://youtu.be/q3ZLwCWjXzg

ಮಹಾರಾಷ್ಟ್ರ ಸರ್ಕಾರದೊಂದಿಗಿನ ಗಡಿ ವಿವಾದದ ಬಗ್ಗೆ ಕರ್ನಾಟಕ ಸರ್ಕಾರ ಎಂದಿಗೂ ಮೌನವಾಗಿರಬಾರದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಗಡಿ ಭಾಗಕ್ಕೆ ಸಂಬಂಧಿಸಿದಂತೆ ಮಹಾಜನ್ ಆಯೋಗದ ವರದಿಯನ್ನು ಕರ್ನಾಟಕ ಸರ್ಕಾರ ಒಪ್ಪಿಕೊಂಡಿದೆ.

ಆದರೆ ಮಹಾರಾಷ್ಟ್ರ ಇನ್ನೂ ಚಕಾರ ಎತ್ತುತ್ತಿದೆ. ನಮ್ಮ ರಾಜ್ಯ ಜಾಗ ಬಿಟ್ಟುಕೊಡಬಾರದು. ನೆಲ-ಜಲ-ಗಡಿ ರಕ್ಷಣೆ ನಮ್ಮ ಹಕ್ಕು,

ಈ ವಿಚಾರದಲ್ಲಿ ಮೌನದಿಂದ ಇರಬೇಡಿ ಎಂದು ಸಿದ್ದರಾಮಯ್ಯ ಹೇಳಿದರು.

ಈ ಹಿಂದೆ ಡಿಸೆಂಬರ್ 2022 ರಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ತೀವ್ರ ಚರ್ಚೆಗೆ ಕಾರಣವಾದಾಗ ಮುಖ್ಯಮಂತ್ರಿ

ಬೊಮ್ಮಾಯಿ ಅವರು ಮಹಾರಾಷ್ಟ್ರಕ್ಕೆ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಘಟುಧ್ವನಿಯಲ್ಲಿ ಹೇಳಿದ್ದರು.

ಮಹಾರಾಷ್ಟ್ರ ಸರ್ಕಾರವು 260 ಪ್ರಧಾನವಾಗಿ ಕನ್ನಡ ಮಾತನಾಡುವ ಗ್ರಾಮಗಳನ್ನು ವರ್ಗಾಯಿಸಲು ಇಚ್ಛೆ ವ್ಯಕ್ತಪಡಿಸಿತ್ತು, ಆದರೆ ಕರ್ನಾಟಕ ರಾಜ್ಯವು ಈ ಪ್ರಸ್ತಾವನೆಯನ್ನು ತಿರಸ್ಕರಿಸಿತು. ನಂತರ ಎರಡೂ ಸರ್ಕಾರಗಳು ಈ ವಿಷಯವನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋಯಿತು.

Exit mobile version