ಕರ್ನಾಟಕದ ನೂತನ ಸಿಎಂ ಆಗಿ ಇಂದು ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜು. 28: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 30ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ನೂತನ ಡಿಸಿಎಂ ಆಗಿ ಆಯ್ಕೆ ಆಗಿರುವ ಗೋವಿಂದ ಕಾರಜೋಳ, ಶ್ರೀರಾಮುಲು ಹಾಗೂ ಆರ್. ಅಶೋಕ ಸಹ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಮಾಣ ವಚನ ಸಮಾರಂಭದ ನಂತರ ಸಚಿವ ಸಂಪುಟ ಸಭೆ ನಡೆಸಲಿದ್ದೇನೆ. ನಂತರ ರಾಜ್ಯದ ಪ್ರವಾಹ ಹಾಗೂ ಕೊರೊನಾ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ” ಎಂದು ತಿಳಿಸಿದ್ದಾರೆ.

ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ.

Exit mobile version