ವಿಧಾನ ಪರಿಷತ್ ‌ಉಪ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು, ಫೆ. 09: ಭಾರೀ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಗೆ ಮೇಲುಗೈ ದೊರೆತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆಗೊಂಡರು.

ಬಸವರಾಜ ಹೊರಟಿ ಅವರು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ಕಣಕ್ಕಿಳಿದಿದ್ದರು. ಈ ನಡುವೆ ಮಂಗಳವಾರ ನಡೆದ ಚುನಾವಣೆಯ ಅಂತಿಮ ಕ್ಷಣದಲ್ಲಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದರು. ಇದರಿಂದಾಗಿ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿಯಾಗಿ ಅವಿರೋಧ ಆಯ್ಕೆಗೊಂಡರು.

Exit mobile version