ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ

ಬೆಂಗಳೂರು, ಡಿ. 04: ಶೀಘ್ರದಲ್ಲಿ ಬಿಬಿಎಂಪಿ ಎಲೆಕ್ಷನ್‌ ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ನೀಡಿದಂತಹ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಫೆಬ್ರವರಿಯೊಳಗೆ ಎಲೆಕ್ಷನ್‌ ಆಗಬೇಕು ಎಂದು ಸೂಚಿಸಿದೆ.

ಚುನಾಯಿತ ಸದಸ್ಯರ ಅವಧಿ ಮುಗಿದಿರುವ ಬಿಬಿಎಂಪಿಗೆ ಶಿಘ್ರದಲ್ಲಿಯೇ ಚುನಾವಣೆ ಮಾಡಬೇಕೆಂದು ಕೋರಿ ಕಾಂಗ್ರೆಸ್‌ ಪಕ್ಷದ ಮಾಜಿ ಸದಸ್ಯ ಎಂ ಶಿವರಾಜು ಸಾರ್ವಜನಿಕ ಹಿತಾಸಕ್ತಿಯಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯ ಬಳಿಕ ಹೈಕೋರ್ಟ್‌, ಫೆಬ್ರವರಿಯೊಳಗೆ 198 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಬೇಕೆಂದು ಆದೇಶಿಸಿದೆ.

ಬಿಬಿಎಂಪಿ ಎಲೆಕ್ಷನ್‌ ಮೀಸಲಾತಿ ಪಟ್ಟಿ ಪ್ರಕಟಿಸಲು ಒಂದು ತಿಂಗಳ ಗಡುವು ನೀಡಿದೆ. ಮೀಸಲಾತಿ ಪಟ್ಟಿ ಪ್ರಕಟಿಸಿದ ಆರು ವಾರದೊಳಗೆ ಎಲೆಕ್ಷನ್‌ ನಡೆಯಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.

ಅಲ್ಲದೇ 198 ವಾರ್ಡ್‌ಗಳಿಂದ 243 ವಾರ್ಡ್‌ಗಿಗೆ ಹೆಚ್ಚಿಸುವಂತೆ ಸರ್ಕಾರ ನಿರ್ಧಾರ ಕೈಗೊಂಡಿತ್ತು, ಆದರೆ ಈ ನಿರ್ಧಾರಕ್ಕೆ ಈಗ ಹಿನ್ನಡೆಯಾಗಿದೆ.

Exit mobile version