Bengaluru: ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಸಿಲಿಕಾನ್ ಸಿಟಿ (BBMP Property Tax Update) ಜನರಿಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ. 2024-25ನೇ ಸಾಲಿಗೆ ಬೆಂಗಳೂರಿನಲ್ಲಿ
ಆಸ್ತಿ ತೆರಿಗೆ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ತಳ್ಳಿಹಾಕಿದ್ದು, 2016ರಲ್ಲಿ ಅಳವಡಿಸಿಕೊಂಡ ಲೆವಿ ಲೆಕ್ಕಾಚಾರ ವಿಧಾನವೇ ಮುಂದುವರಿಯುತ್ತದೆ ಎಂದು ತಿಳಿಸಿದೆ.
ಕೆಲ ದಿನಗಳ ಹಿಂದಷ್ಟೇ ಏಪ್ರಿಲ್ (April) 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು (Bengaluru) ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆ ಬಗ್ಗೆ ಹೆಚ್ಚಿನ ಸುದ್ದಿ ಹರಿದಾಡುತ್ತಿದ್ದು,
ಇದೀಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D K Shivakumar) ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಬಿಬಿಎಂಪಿ (BBMP) ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಈ ಕುರಿತಾಗಿ
ಬೆಂಗಳೂರಿನ ನಿವಾಸಿಗಳು ಆತಂಕಪಡುವ (BBMP Property Tax Update) ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಕುರಿತಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಕೂಡ ಪ್ರತಿಕ್ರಿಯಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆ ಬಗ್ಗೆ
ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಸುಳ್ಳು ಸುದ್ದಿಗಳನ್ನು ಅಪ್ಲೋಡ್ ಮಾಡುವವರ ವಿರುದ್ಧ ಕೂಡಾ ಕ್ರಮ ತೆಗೆದುಕೊಳ್ಳಲಾಗುತ್ತದೆ
ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ (Karnataka) ಭಾರಿ ತೆರಿಗೆ ಹೆಚ್ಚಳವಾಗಲಿದೆ ಎಂದು ಇನ್ಸ್ಟಾಗ್ರಾಮ್ ಪೇಜ್ನಲ್ಲಿ (Instagram Page) ವ್ಯಕ್ತಿಯೊಬ್ಬರು ವಿಡಿಯೋ ಹರಿಬಿಟ್ಟಿದ್ದರು. ಬಾಡಿಗೆ ಮನೆಗಳ ಮೇಲಿನ ಆಸ್ತಿ
ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ಮೇಲಿನ ತೆರಿಗೆ 3 ರಿಂದ 5 ಪಟ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದರು. ಇದರಿಂದ ಬೆಂಗಳೂರಿನ ನಿವಾಸಿಗಳು ಆತಂಕದಲ್ಲಿದ್ದರು. ಇದೀಗ ಈ ಕುರಿತಾಗಿ ರಾಜ್ಯ
ಸರ್ಕಾರ ಹಾಗೂ ಬಿಬಿಎಂಪಿ ಸ್ಪಷ್ಟನೆ ನೀಡಿದೆ.
ಇದನ್ನು ಓದಿ: ಮನುಷ್ಯನಾಗುವುದು ತನ್ನ ಗುಣದಿಂದ.. ಹುಟ್ಟಿನಿಂದಲೊ ಜುಟ್ಟಿನಿಂದಲೊ ಅಲ್ಲ –ನಟ ಕಿಶೋರ್