ಮಕ್ಕಳಿಗೆ ಹಾಜರಾತಿ ಕಡ್ಡಾಯವಿಲ್ಲ – ಬಿ.ಸಿ. ನಾಗೇಶ್.!

ಕೊರೊನಾ ಮತ್ತು ಓಮಿಕ್ರಾನ್‌ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ ಹಾಗೂ ಯಾವ ಮಕ್ಕಳೂ ಶಾಲೆಗೆ ಬನ್ನಿ ಎಂದು ಬಲವಂತಪಡಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್ಎಸ್ಎಲ್ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದರು.


ಇನ್ನು ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.ಕಳೆದ ವಾರ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲೇ ಶಾಲೆ ಆರಂಭದ ಬಗ್ಗೆ ಚರ್ಚಿಸಲಾಗಿತ್ತು. ಇದೀಗ 29ರಂದು ನಡೆಯುವ ತಜ್ಞರ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.


ರಾಜ್ಯದ 19 ಜಿಲ್ಲೆಗಳಲ್ಲಿ 246 ಶಾಲೆಗಳನ್ನು ಕೋವಿಡ್ ಕಾರಣದಿಂದ ಬಂದ್ ಮಾಡಲಾಗಿತ್ತು. ಅದರಲ್ಲೂ ಮೂರರಿಂದ 7 ದಿನಗಳವರೆಗೆ ಮಾತ್ರ ಬಂದ್ ಮಾಡಿ ಮತ್ತೆ ಆರಂಭಿಸಲಾಗಿದೆ. ಜ.29ರಂದು ಶಾಲೆ ಆರಂಭದ ಬಗ್ಗೆ ನಿರ್ಧಾರ ರಾಜ್ಯದಲ್ಲಿ ಕೋವಿಡ್ ಪ್ರಕರಣ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಪುನರಾರಂಭ ಮಾಡಲಾಗಿದದ ಶಾಲೆಗಳನ್ನು ಬೆಂಗಳೂರಿನಲ್ಲಿ ಬಂದ್ ಮತ್ತೆ ಮಾಡಲಾಗಿತ್ತು. ಅವುಗಳನ್ನು ಮುಂದಿನ ವಾರದಿಂದಲೇ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಖಚಿತಪಡಿಸಿದರು.


ಕೊರೊನಾ ಸೋಂಕು ಮೂರನೇ ಅಲೆಯಿಂದ ಯಾವ ಮಕ್ಕಳಿಗೂ ಹೆಚ್ಚಿನ ತೊಂದರೆಯಿಲ್ಲ. ಆದರೂ ಆರೋಗ್ಯದ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Exit mobile version