IPL 14ನೇ ಆವೃತ್ತಿಯ ಬಾಕಿ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಮೊದಲ ಪಂದ್ಯದಲ್ಲಿ CSK vs MI ಮುಖಾಮುಖಿ

ಹೊಸದಿಲ್ಲಿ ಜು 26 : ಕೊರೊನಾ ಹಿನ್ನೆಲೆಯಲ್ಲಿ ಅರ್ಧಕ್ಕೆ ಮೊಟಕುಗೊಂಡಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಬಾಕಿ ಪಂದ್ಯಗಳು ಸೆಪ್ಟೆಂಬರ್ 19ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೂರ್ನಿಯ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಕೊರೊನಾ ಕಾರಣದಿಂದ‌ ಕಳೆದ ಮೇ‌ ತಿಂಗಳಲ್ಲಿ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಮುಂದೂಡಲಾಗಿತ್ತು. ನಂತರ ದುಬೈನಲ್ಲಿ ಟೂರ್ನಿಯ ಉಳಿದ ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15ರವರೆಗೆ ನಡೆಸಲು ತೀರ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಟೂರ್ನಿಯ ಬಾಕಿ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದ್ದು, 27 ದಿನಗಳ ಈ ಅವಧಿಯಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು

Exit mobile version