ಐಪಿಎಲ್ 2021: ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

ಹೊಸದಿಲ್ಲಿ, ಮೇ. 29: ಕೊರೊನಾ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ ಉಳಿದ ಪಂದ್ಯಗಳನ್ನು ಯುಎಇನಲ್ಲಿ ನಡೆಸುಬ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧಿಕೃತ ಘೋಷಣೆ ಮಾಡಿದೆ.

ಭಾರತದಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯ ಯಶಸ್ವಿಯಾಗಿ ನಡೆಯುತ್ತಿತ್ತು. ಆದರೆ ಟೂರ್ನಿಯ ಮಧ್ಯಂತರದ ವೇಳೆ ಹಲವು ಆಟಗಾರರು ಹಾಗೂ ತಂಡದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾದ ಪರಿಣಾಮ ಮೇ 4ರಂದು ಟೂರ್ನಿಯನ್ನು ಮುಂದೂಡಿ, ಬಿಸಿಸಿಐ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿರುವ ಟೂರ್ನಿಯ ಮುಂದಿನ ಪಂದ್ಯಗಳನ್ನು ದುಬೈನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.

ಭಾರತದಲ್ಲಿ ಕೊರೊನಾ ಆತಂಕ ಈವರೆಗೂ ಕಡಿಮೆಯಾಗದ ಪರಿಣಾಮ ಪ್ರಸಕ್ತ ಟೂರ್ನಿಯ ಉಳಿದ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಟೂರ್ನಿಯ ಮುಂದಿನ 31 ಪಂದ್ಯಗಳನ್ನು ಅರಬ್ ರಾಷ್ಟ್ರದಲ್ಲಿ ನಡೆಸಲಾಗುತ್ತಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

Exit mobile version