ರಾಜ್ಯದಲ್ಲಿ ಜುಲೈ 1ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ

ಬೆಂಗಳೂರು, ಜೂ. 04: ಮಹಾಮಾರಿ ಕೊರೊನಾ ಸಂಕಷ್ಟ ಇನ್ನೂ ಜೀವಂತವಾಗಿರುವ ಬೆನ್ನಲ್ಲೇ ಜುಲೈ 1ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂ.15ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ. ಇದು ಮುಗಿಯುತ್ತಿದಂತೆಯೇ ಜು.1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ಕೊರೊನಾ ಪರಿಸ್ಥಿತಿ ಇದೇ ರೀತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳ ಬದಲಾಗಿ ಆನ್‍ಲೈನ್ ತರಗತಿಗಳನ್ನೇ ನಡೆಸಲಾಗುತ್ತದೆ. ಈ ವೇಳಾಪಟ್ಟಿಯು ಕೊರೋನಾ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿದೆ. ಒಂದು ವೇಳೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದೆ ಹೋಗುವ ಸಾಧ್ಯತೆ ಕೂಡ ಇದೆ ಎಂದು ಸ್ಪಷ್ಟಪಡಿಸಿದರು.

ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್​ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್​ ಮಾಡಲಾಗುತ್ತೆ.

Exit mobile version