Visit Channel

ಸುವರ್ಣಸೌಧ ಮುಂದೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

 ಬೆಳಗಾವಿ ಡಿ 16 : ರಾಜ್ಯ ಸರ್ಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದ್ದು ಸರ್ಕಾರಿ ಟೆಂಡರ್‌ಗಳಲ್ಲಿ ಶೇ 40%ರಷ್ಟು ಕಮಿಷನ್‌ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಇಂದು ಕಾಂಗ್ರೆಸ್‌ ಬೃಹತ್‌ ರ್ಯಾಲಿಯನ್ನು ಹಮ್ಮಿಕೊಂಡಿತ್ತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ನಾಯಕರ ಟ್ರ್ಯಾಕ್ಟರ್ ರ್ಯಾಲಿ ಬಿಸಿ ಮುಟ್ಟಿಸಿದೆ.

ಗುರುವಾರ ಸುವರ್ಣಸೌಧಕ್ಕೆ ಟ್ರ್ಯಾಕ್ಟರ್‌ನಲ್ಲೇ ಬಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನ ದ್ವಾರದಲ್ಲೇ ಪೊಲೀಸರು ತಡೆದರು. ಈ ವೇಳೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ಉ ಸದನಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಬೆಳಗಾವಿ ಗ್ರಾಮೀಣ ಜಿಲ್ಲೆ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಾ ಬಂದರು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರ ಮುಖಂಡರು ಇದ್ದರು.

Latest News

Assam
ದೇಶ-ವಿದೇಶ

ತನ್ನ ಪ್ರೀತಿಯನ್ನು ನಿರೂಪಿಸಲು, ಏಡ್ಸ್ ರೋಗವಿರುವ ಪ್ರಿಯಕರನ ರಕ್ತವನ್ನು ತನ್ನ ದೇಹಕ್ಕೆ ಚುಚ್ಚಿಕೊಂಡ 15 ವರ್ಷದ ಹುಡುಗಿ!

ಏಡ್ಸ್ ರೋಗವಿರುವ ತನ್ನ ಹುಡುಗನ ರಕ್ತವನ್ನು ಸೂಜಿಯ ಮೂಲಕ ತನ್ನ ದೇಹಕ್ಕೆ ಚುಚ್ಚಿಕೊಂಡಿದ್ದಾಳಂತೆ! ಇನ್ನೊಂದು ಅಚ್ಚರಿಯ ವಿಷಯ ಎಂದರೆ, ಈಕೆಯ ವಯಸ್ಸು ಕೇವಲ 15 ವರ್ಷ!

Shivamogga
ಪ್ರಮುಖ ಸುದ್ದಿ

ರಾತ್ರಿ ವೇಳೆ ಅನಗತ್ಯ ಬೈಕ್ ಸಂಚಾರ ನಿಷೇಧ ; ಇಬ್ಬರು ಯುವಕರು ಬೈಕ್‍ನಲ್ಲಿ ಸಂಚರಿಸುವಂತಿಲ್ಲ : ಎಡಿಜಿಪಿ

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು, ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನವರನ್ನು ಕೂರಿಸಿಕೊಂಡು ಸಂಚರಿಸುವುದನ್ನು ನಿಷೇಧಿಸಲಾಗಿದೆ.

Lal singh Chadda
ಮನರಂಜನೆ

`ಲಾಲ್ ಸಿಂಗ್ ಚಡ್ಡಾʼ ಹೊಗಳಿದ ಹೃತಿಕ್ ; `ಕಾಶ್ಮೀರ ಫೈಲ್ಸ್ʼ ಬಗ್ಗೆ ಯಾಕೆ ಮಾತನಾಡಲಿಲ್ಲ? : ಸಿಡಿದೆದ್ದ ನೆಟ್ಟಿಗರು!

ಹೃತಿಕ್ ರೋಷನ್ ʼಲಾಲ್ ಸಿಂಗ್ ಚಡ್ಡಾʼ(Lal Singh Chadda) ಚಿತ್ರವನ್ನು ನೋಡುವಂತೆ ಕರೆ ನೀಡಿರುವುದು ನೆಟ್ಟಿಗರ(Netizens) ಆಕ್ರೋಶಕ್ಕೆ ಕಾರಣವಾಗಿದೆ.