ಇಂದಿನಿಂದ ಬೆಳಗಾವಿ ಅಧಿವೇಶನ: ಬಿಜೆಪಿ- ಜೆಡಿಎಸ್ ಬಳಿಯಿರುವ ಅಸ್ತ್ರಗಳಾವುವು?

Belagavi: ಇಂದಿನಿಂದ ಗಡಿಜಿಲ್ಲೆ ಬೆಳಗಾವಿಯಲ್ಲಿ (Belgaum Winter Session 2023) ವಿಧಾನಸಭೆಯ ಅಧಿವೇಶನ ನಡೆಯಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳಾದ

ಬಿಜೆಪಿ ಹಾಗೂ ಜೆಡಿಎಸ್ (JDS) ಭರ್ಜರಿ ತಯಾರಿಯೊಂದಿಗೆ ಕಣಕ್ಕೆ ಇಳಿಯಲಿವೆ. ಬಿಜೆಪಿ ಮತ್ತು ಜೆಡಿಎಸ್ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ಸಜ್ಜುಗೊಂಡಿವೆ.

ಈ ಮೂಲಕ ಸದನ ಕದನಕ್ಕೆ ವೇದಿಕೆ ಸಿದ್ಧಗೊಂಡಿದೆ. ಬಿಜೆಪಿ (BJP) ಮತ್ತು ಜೆಡಿಎಸ್ ಬಳಿ ಇರುವ ಪ್ರಮುಖ ಅಸ್ತ್ರಗಳೆಂದರೆ,

ಅಸ್ತ್ರ – 1 ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಪುತ್ರ (Belgaum Winter Session 2023) ಯತೀಂದ್ರ ಮೇಲಿರುವ ವರ್ಗಾವಣೆ ದಂಧೆ ಆರೋಪ :


ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ (Yathindra) ಮೇಲಿರುವ ವರ್ಗಾವಣೆ ದಂಧೆಯ ಆರೋಪ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಸಿದ್ದು ಪುತ್ರ ಯತೀಂದ್ರ ಅವರು

ಮಾತನಾಡಿದ್ದ ಒಂದು ವಿಡಿಯೋ ಕೂಡಾ ವೈರಲ್ (Viral) ಆಗಿತ್ತು. ಇದನ್ನೇ ಮುಂದಿಟ್ಟುಕೊಂಡು, ಕಾಂಗ್ರೆಸ್ ಸರ್ಕಾರವನ್ನು ಹಣಿಯಲು ಬಿಜೆಪಿ ಹಾಗೂ ಜೆಡಿಎಸ್ ರೆಡಿಯಾಗಿವೆ.

ಅಸ್ತ್ರ – 2 ಡಿಕೆಶಿ ವಿರುದ್ಧ ಸಿಬಿಐ (CBI) ತನಿಖೆಗೆ ಅನುಮತಿ ವಾಪಸ್ ವಿಚಾರ :
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D K Shivakumar) ವಿರುದ್ಧ ಸಿಬಿಐಗೆ ನೀಡಿದ್ದ ತನಿಖಾ ಅನುಮತಿಯನ್ನು ರದ್ದು ಮಾಡಿರುವ ಸರ್ಕಾರದ ಕ್ರಮವು ಅಧಿವೇಶನದಲ್ಲಿ ಚರ್ಚೆಗೆ

ಬರಲಿದೆ. ಕಾಂಗ್ರೆಸ್ (Congress) ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಅನುಮತಿ ವಾಪಸ್ ಪಡೆದುಕೊಂಡಿದೆ ಎಂಬುದು ವಿರೋಧ ಪಕ್ಷಗಳ ಆರೋಪವಾಗಿದ್ದು, ಅಧಿವೇಶನದಲ್ಲಿ ಈ

ವಿಚಾರ ಸದ್ದು ಗದ್ದಲಕ್ಕೆ ಕಾರಣವಾಗಬಹುದು.

ಅಸ್ತ್ರ – 3 ಬರ :
ಬರ ನಿರ್ವಹಣೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರೈತರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ, ಇನ್ನೊಂದೆಡೆ ಲೋಡ್ ಶೆಡ್ಡಿಂಗ್ (Load Shedding)

ನಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂಬ ವಿಷಯಗಳು ಕೂಡಾ ಅಧಿವೇಶನದಲ್ಲಿ ವಾಕ್ಸಮರಕ್ಕೆ ಕಾರಣವಾಗಲಿವೆ.

ಅಸ್ತ್ರ 4 – ಜಮೀರ್ ಹೇಳಿಕೆ :
“ಅಲ್ಪಸಂಖ್ಯಾತ ಸಮುದಾಯದ ಸ್ಪೀಕರ್ ಮುಂದೆ ಬಿಜೆಪಿ ನಾಯಕರು ಕೈಮುಗಿದು ನಿಲ್ಲಬೇಕಾದ ಪರಿಸ್ಥಿತಿ ಇದೆ” ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Jameer Ahmed Khan) ಕೊಟ್ಟ

ಹೇಳಿಕೆ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗಬಹುದು.

ಅಸ್ತ್ರ 5- ಗ್ಯಾರಂಟಿ ವೈಫಲ್ಯ : ಗೃಹಲಕ್ಷ್ಮೀ ಸೇರಿದಂತೆ ಸರ್ಕಾರ ನೀಡಿರುವ ಗ್ಯಾರಂಟಿಗಳು ಸೂಕ್ತ ರೀತಿಯಲ್ಲಿ ಜಾರಿಯಾಗುತ್ತಿಲ್ಲ. ಗೃಹಲಕ್ಷ್ಮೀ (Gruhalakshmi) ಯೋಜನೆಯ 2ನೇ ಕಂತಿನ

ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂಬ ವಿಚಾರ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಒಟ್ಟಾರೆಯಾಗಿ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಹೋರಾಟ ನಡೆಯಲಿದೆ. ಲೋಕಸಭಾ ಚುನಾವಣಾ ದೃಷ್ಟಿಯಿಂದ ಎರಡು ಪಕ್ಷಗಳ ನಡುವೆ ಮೈತ್ರಿಯಾಗಿದೆ. ಸದನದಲ್ಲೂ

ಎರಡು ಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲಿದೆ. ಈ ಎರಡು ಪಕ್ಷಗಳನ್ನು ಎದುರಿಸುವುದು ಸರ್ಕಾರಕ್ಕೆ ಸವಾಲಾಗಲಿದೆ.

ಇದನ್ನು ಓದಿ: ಈಶಾನ್ಯ ರೈಲ್ವೆಯಲ್ಲಿ 1104 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ

Exit mobile version