ಬೆಳ್ಳಂದೂರು ಪ್ರಕರಣ, ಸಿಎಂ ಬಿಎಸ್‌ವೈ ರಿಟ್ ಅರ್ಜಿ ವಜಾ..!

ಬೆಂಗಳೂರು, . 05: ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್‌ನಿಂದ ಗ್ರೀನ್‌ಸಿಗ್ನಲ್ ಸಿಕ್ಕಿದೆ. ಯಡಿಯೂರಪ್ಪರವರಿಗೆ ಇದೀಗ ಹೊಸ ಸಂಕಟ ಶುರುವಾಗಿದೆ.

2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್  ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದೆ.

Exit mobile version