ಅನಿರ್ದಿಷ್ಟಾವಧಿವರೆಗೆ ಕ್ರಿಕೆಟ್ ನಿಂದ ದೂರವಿರಲು ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ನಿರ್ಧಾರ: ಭಾರತದ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯ

ಹೊಸದಿಲ್ಲಿ, ಜು. 31: ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅನಿರ್ದಿಷ್ಟಾವಧಿವರೆಗೆ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದು, ಹೀಗಾಗಿ ಭಾರತದ ವಿರುದ್ಧ ಆ.4ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ‌.

ಬೆನ್ ಸ್ಟೋಕ್ಸ್ ಕ್ರಿಕೆಟ್ ನಿಂದ ದೂರ ಉಳಿಯಲು ಅವರಿಗೆ ಎದುರಾಗಿರುವ ಗಾಯದ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆ ಕಾರಣ ಎನ್ನಲಾಗಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸಹ ಸ್ಟೋಕ್ಸ್ ಅವರ ನಿರ್ಧಾರಕ್ಕೆ ಬದ್ಧವಾಗಿದೆ. ಸ್ಟೋಕ್ಸ್ ಅವರ ಈ ನಿರ್ಧಾರದ ಹಿನ್ನೆಲೆಯಲ್ಲಿ ಭಾರತದ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡಲಿರುವ ಇಂಗ್ಲೆಂಡ್ ತಂಡದಿಂದ ಅವರ ಹೆಸರನ್ನು ಕೈಬಿಡಲಾಗಿದೆ.

ಅದರೆ ಬೆನ್ ಸ್ಟೋಕ್ಸ್ ಅವರ ನಿರ್ಧಾರವನ್ನು ಬೆಂಬಲಿಸಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ಸ್ಟೋಕ್ಸ್ ಅವರಿಗೆ ಎಲ್ಲಾ ರೀತಿ ಸಹಕಾರ ನೀಡುವುದಾಗಿಯೂ ತಿಳಿಸಿದೆ. ಮತ್ತೊಂದೆಡೆ ಟೆಸ್ಟ್ ತಂಡದಿಂದ ಬೆನ್ ಸ್ಟೋಕ್ಸ್ ಹೊರಗುಳಿದಿರುವುದರಿಂದ ಅವರ ಸ್ಥಾನಕ್ಕೆ ಕ್ರೇಗ್ ಓವರ್ಟನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಶ್ರೀಘ್ರವೇ ಇಂಗ್ಲೆಂಡ್ ತಂಡವನ್ನ ಸೇರಿಕೊಳ್ಳಲಿದ್ದಾರೆ.

Exit mobile version