ಎಳ್ಳು ಸೇವನೆಯಿಂದ ಏನೆಲ್ಲಾ ಆರೋಗ್ಯಕರ ಪ್ರಯೋಜನಗಳಿವೆ ಗೊತ್ತಾ? ಹಾಗಾದ್ರೆ ಇದನ್ನು ಓದಿ

ಭಾರತೀಯ ಪಾಕಪದ್ಧತಿಯಲ್ಲಿ ಎಳ್ಳು ಬೀಜಗಳು ಪ್ರಮುಖ ಪಾತ್ರವಹಿಸಿದ್ದು, ಸಿಹಿ ತಿನಿಸುಗಳು, ಪಾನೀಯಗಳ ರುಚಿ ಮತ್ತು ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಹಿಡಿದು ಪೌಷ್ಠಿಕಾಂಶವನ್ನು ಹೆಚ್ಚಿಸುವವರೆಗೆ, ಹಲವಾರು ಆರೋಗ್ಯಕರ ಪ್ರಯೋಜನಗಳಿಗಾಗಿ ಬಳಸಲಾಗುತ್ತದೆ. ನಮ್ಮ ಆಹಾರದಲ್ಲಿ ಎಳ್ಳನ್ನು ಸೇರಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಹಾಗಾದ್ರೆ ಆ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಹೆಚ್ಚಿನ ಪ್ರಮಾಣದಲ್ಲಿ ಲಿಗ್ನಾನ್‌ಗಳು
ಹೆಚ್ಚಿನ ಪ್ರಮಾಣದಲ್ಲಿ ಎಳ್ಳು ಬೀಜಗಳು ಲಿಗ್ನಾನ್‌ಗಳನ್ನು (Lignan) ಹೊಂದಿದ್ದು, ಇದು ಮೂಲತಃ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿರುವ ಸಸ್ಯ ಸಂಯುಕ್ತಗಳ ಗುಂಪಾಗಿದೆ. ಇದು ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದಲ್ಲದೆ ಹಾರ್ಮೋನುಗಳ ಸಮತೋಲನವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ ಮತ್ತು ಋತುಬಂಧದ ಲಕ್ಷಣಗಳನ್ನು ನಿವಾರಿಸಲು ಸಹಕಾರಿಯಾಗಿದೆ.

ಜೀರ್ಣಕ್ರಿಯೆಗೆ ಸಹಾಯಕಾರಿ
ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ (Fiber) ಅಂಶವಿದ್ದು, ಜೀರ್ಣಕಾರಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಎಳ್ಳಿನಲ್ಲಿರುವ ಫೈಬರ್ ನಿಯಮಿತ ಕರುಳಿನ ಚಲನೆಯನ್ನು ಬೆಂಬಲಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವುದಲ್ಲದೆ ಯೋಗಕ್ಷೇಮಕ್ಕೆ ಅವಶ್ಯಕವಾಗಿದೆ.

ಮೂಳೆಗಳ ಸಮಸ್ಯೆಗೆ ಪರಿಹಾರ
ಇನ್ನು ಕ್ಯಾಲ್ಸಿಯಂ (Calcium) , ಮೆಗ್ನೀಸಿಯಮ್ ಮತ್ತು ರಂಜಕದಂತಹ ಖನಿಜಗಳ ಅತ್ಯುತ್ತಮ ಮೂಲವಾಗಿದ್ದು, ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಪ್ರತಿದಿನ ಎಳ್ಳನ್ನು ಸೇವಿಸುವುದರಿಂದ ಮೂಳೆಯ ಸಾಂದ್ರತೆಯನ್ನು ಸುಧಾರಿಸಲು ಮತ್ತು ಆಸ್ಟಿಯೊಪೊರೋಸಿಸ್‌ನಂತಹ (Osteoporosis) ಪರಿಸ್ಥಿತಿಗಳನ್ನು ತಡೆಯಲು ಸಹಾಯಕಾರಿಯಾಗಿದೆ.

ಚರ್ಮ ಮತ್ತು ಕೂದಲಿಗೆ ಒಳ್ಳೆಯದು
ಹೆಚ್ಚಿನ ಪ್ರಮಾಣದ ವಿಟಮಿನ್ ಇ ಅಂಶ ಇರುವುದರಿಂದ ಇದು ಉತ್ತಮ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಕಾಲಜನ್ ಉತ್ಪಾದನೆಗೆ ಮತ್ತು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ. ಆದರೆ ಚರ್ಮವನ್ನು ಫ್ರೀ ರಾಡಿಕಲ್ ಹಾನಿಯಿಂದ ರಕ್ಷಿಸುವುದಲ್ಲದೆ. ವಿಟಮಿನ್ ಇ (Vitamin E) ಉತ್ಕರ್ಷಣ ನಿರೋಧಕವಾಗಿದೆ

ಭವ್ಯಶ್ರೀ ಆರ್.ಜೆ

Exit mobile version