ತಮಿಳುನಾಡಿಗೆ (Tamilnadu) ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ಗೆ (Bengaluru Bandh on 26th) ಕರ್ನಾಟಕ ಜಲ ಸಂರಕ್ಷಣಾ ಸಮಿತಿ
ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಕರ್ನಾಟಕ (Karnataka) ಜಲ ಸಂರಕ್ಷಣಾ ಸಮಿತಿಯ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಭೆ ನಡೆಸಿದ ನಂತರ ಈ ನಿರ್ಧಾರವನ್ನು
(Bengaluru Bandh on 26th) ಪ್ರಕಟಿಸಿದ್ದಾರೆ.

ಸೆಪ್ಟೆಂಬರ್ 26ರಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ (Town Hall) ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ರ್ಯಾ ಲಿ ನಡೆಯಲಿದೆ. ಈ ವೇಳೆ ರಾಜ್ಯದ ಎಲ್ಲ ಸಂಘಟನೆಗಳು
ಭಾಗಿಯಾಗಲಿವೆ ಎಂದು ಸಮಿತಿ ಹೇಳಿದೆ. ಕನ್ನಡಪರ ಹೋರಾಟಗಾರರ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಕನ್ನಡ ಚಳುವಳಿ ಕೇಂದ್ರ ಸಮಿತಿ, ಜಯಕರ್ನಾಟಕ (Jayakarnataka) ಸಂಘಟನೆ,
ರಾಜಸ್ಥಾನಿ ಭಾಷಿಕರ ಸಂಘ ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ,
ಬಿಬಿಎಂಪಿ (BBMP) ನೌಕರರ ಕ್ಷೇಮಾಭಿವೃದ್ಧಿ ಸಂಘ, ಆಮ್ ಆದ್ಮಿ ಪಕ್ಷ, ತಮಿಳುಸಂಘ, ಕೆಂಪೇಗೌಡ ಸಮಿತಿ, , ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ 100ಕ್ಕೂ ಹೆಚ್ಚು ಸಂಘಟನೆಗಳು ಈ ಬಂದ್ಗೆ ಬೆಂಬಲ ಸೂಚಿಸಿವೆ.
ಇನ್ನು ರಾಜ್ಯ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿರುವ (Bengaluru) ಎಲ್ಲ ಕೈಗಾರಿಕೆಗಳು, ಐಟಿ ಕಂಪನಿಗಳು, ಕಾರ್ಮಿಕ ಸಂಘಟನೆಗಳು, ಕೈಗಾರಿಕೋದ್ಯಮಿಗಳು, ಸಾರ್ವಜನಿಕ ಸೇವಾ ಸಂಸ್ಥೆಗಳು,
ಶಾಲಾ-ಕಾಲೇಜುಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಆಟೋ ಚಾಲಕರು, ಕ್ಯಾಬ್ ಚಾಲಕರು, ಲಾರಿ ಮಾಲಿಕರ ಸಂಘ, ಕೂಲಿ ಕಾರ್ಮಿಕರ ಸಂಘ, ಬೀದಿಬದಿ ವ್ಯಾಪಾರಿಗಳ ಸಂಘ ಸೇರಿದಂತೆ ಎಲ್ಲ
ಸಂಘಟನೆಗಳು ಸ್ವಯಂ ಪ್ರೇರಿತವಾಗಿ ಬಂದ್ಗೆ ಬೆಂಬಲಿಸುಂತೆ ಮನವಿ ಮಾಡಲಾಗಿದೆ ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹೇಳಿದೆ.
ಇದನ್ನು ಓದಿ: ಸಕ್ಕರೆ ನಾಡಲ್ಲಿ ಕಾವೇರಿದ ಕಾವೇರಿ ಹೋರಾಟ: ಮಂಡ್ಯ, ಮದ್ದೂರು ಬಂದ್ಗೆ ಭಾರೀ ಬೆಂಬಲ