ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ಸಾಂಬಾ ಜಾಮೀನು ಅರ್ಜಿ ವಜಾ

ಬೆಂಗಳೂರು ಸೆ 14 : ಸ್ಯಾಂಡಲ್‌ವುಡ್ ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಕಳೆದ ವರ್ಷ ಬಂಧಿಂತನಾಗಿದ್ದ ಡ್ರಗ್ ಫೆಡ್ಲರ್ ಆಫ್ರಿಕಾದ ಲೂಮ್ ಪೆಪ್ಪರ್ ಅಲಿಯಾಸ್ ಸಾಂಬಾಗೆ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶ ಹೊರಡಿಸಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಲೂಮ್ ಪೆಪ್ಪರ್‌ ಸಾಂಬಾ ಎಂಬಾತನನ್ನು ಬಂಧಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ವಿಚಾರಣಾಧೀನ ನ್ಯಾಯಾಲಯವು ಕಳೆದ ಫೆಬ್ರವರಿಯಲ್ಲಿ ಜಾಮೀನು ಮಂಜೂರು ಮಾಡಿತ್ತು. ಆಗ ವಿಚಾರಾಧೀನ ನ್ಯಾಯಾಲಯ ಆರೋಪಿ ಸಾಂಬಾಗೆ ಜಾಮೀನು ಮಂಜೂರು ಮಾಡುವಾಗ ಸ್ವಯಂ ಬಳಕೆಗೆ ಅಲ್ಲದ ಮಾರಾಟ ಮಾಡುವ ಉದ್ದೇಶಕ್ಕೆ ಸಂಗ್ರಹಿಸಿದ ಅಮಲು ಪರ್ಥಗಳಾದ ಎಂಡಿಎಂಎ ವಶಪಡಿಸಿಕೊಂಡಿರುವುದನ್ನು ಪರಿಗಣಿಸಿಲ್ಲ. ಮಾದಕ ವಸ್ತು ಮತ್ತು ಅಮಲು ಪದಾರ್ಥ ಕಾಯಿದೆ ಸೆಕ್ಷನ್ 37(c)(1) b ರ ಅಡಿ ಸಾಂಬಾ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ವಿಚಾರಣಾಧೀನ ನ್ಯಾಯಾಲಯ ಪರಿಗಣಿಸಿಲ್ಲ ಎಂದು ಸರ್ಕಾರದ ಪರ ಅಭಿಯೋಜಕರು ವಾದ ಮಂಡಿಸಿದ್ದರು.

ಪಾಸ್‌ ಪೋರ್ಟ್ ಅವಧಿ ಮುಗಿದರೂ ಭಾರತದಲ್ಲಿಯೇ ಅವನು ನೆಲೆಸಿದ್ದ. ಹೀಗಿದ್ದರೂ ಆತನನ್ನು ಮೂಲ ದೇಶಕ್ಕೆ ವಾಪಸು ಕಳುಹಿಸಬೇಕಿತ್ತು ಎಂಬ ವಿಚಾರವನ್ನು ವಿಚಾರಣಾಧೀನ ನ್ಯಾಯಾಲಯ ಪರಿಗಣಿಸುವ ಗೋಜಿಗೆ ಹೊಗಿಲ್ಲ ಎಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು. ಈ ವಾದವನ್ನು ಆಲಿಸಿದ ಹೈಕೋರ್ಟ್ ಅಧೀನ ನ್ಯಾಯಾಲಯ ನೀಡಿದ್ದ ಜಾಮೀನು ಅರ್ಜಿಯನ್ನು ರದ್ದುಗೊಳಿಸಿದೆ.

Exit mobile version