ಬೆಂಗಳೂರು ಸೆ 23 : ಸಿಲಿಂಡರ್ ಸ್ಪೋಟಗೊಂಡು ಮೂವರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಗರದ ಚಾಮರಾಜಪೇಟೆ ಬಳಿಯ ತರುಗುಪೇಟೆಯಲ್ಲಿ ನಡೆದಿದೆ.
ಈ ಘಟನೆಯು ಗುರುವಾರ ಮಧ್ಯಾಹ್ನ 12.05ರ ಸುಮಾರಿಗೆ ರಾಯನ್ ಸರ್ಕಲ್ ಬಳಿಯ ಕಟ್ಟಡದಲ್ಲಿ ನಡೆದಿದ್ದು. ಗೋದಾಮಿನಿಂದ ದೇಹಗಳು ಛಿದ್ರಗೊಂಡು ಮೇಲೆ ಹಾರಿದ್ದು ರಸ್ತೆಯಲ್ಲಿ ಬಿದ್ದ ದೇಹಗಳನ್ನು ನೋಡಿ ಜನರು ದಿಕ್ಕಾಪಾಲಗಿ ಓಡಿದರು.
ಸ್ಫೋಟದ ತೀವ್ರತೆಗೆ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಅಕ್ಕಪಕ್ಕದ ಮನೆ, ಕಟ್ಟಡದ ಗಾಜುಗಳು ಸಹ ಒಡೆದು ಹೋಗಿವೆ. 10ಕ್ಕೂ ಹೆಚ್ಚು ಬೈಕ್‌ಗಳಿಗೆ ಬೆಂಕಿ ತಗುಲಿದೆ. ಪಂಕ್ಚರ್ ಶಾಪ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ಗೋದಾಮಿನಲ್ಲಿದ್ದ ಇಬ್ಬರು, ಪಂಕ್ಚರ್ ಶಾಪ್ನಲ್ಲಿದ್ದ ಒಬ್ಬ ಸಾವನ್ನಪ್ಪಿದ್ದಾರೆ. ಕಂಪ್ರೆಸರ್ ಅಥವಾ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿಯಿಲ್ಲ. ಮೇಲ್ನೋಟಕ್ಕೆ ಪಟಾಕಿ ಸ್ಫೋಟದ ರೀತಿಯಲ್ಲಿ ಕಾಣುತ್ತಿದೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಜ್ಞರು ಬರುತ್ತಿದ್ದಾರೆ. ಟ್ರಾನ್ಸ್ಪೋರ್ಟ್ ಗೋದಾಮಿನಲ್ಲಿ ಪಟಾಕಿ ಸಂಗ್ರಹದ ಮಾಹಿತಿಯಿದೆ. ಇದೇ ಗೋದಾಮಿನಲ್ಲಿ 15 ಬಾಕ್ಸ್ ಪಟಾಕಿಯಿದೆ ಎಂದು ತಿಳಿಸಿದರು.
ಘಟನಾ ಸ್ಥಳಕ್ಕೆ ವಿವಿ ಪುರಂ ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ