Bengaluru Rain : ಮಹದೇವಪುರ ವಲಯದ ಭಾಗದ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ.

Ashwath Narayan

Bengaluru : ಬೆಂಗಳೂರಿಗರು ಕಂಡು ಕೇಳರಿಯದ ರಣ ಮಳೆಯಿಂದ(Rain), ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಚಿವ ಡಾ. ಸಿ.ಎನ್‌.

ಅಶ್ವತ್ಥ ನಾರಾಯಣ (CN Ashwath Narayan) ಅವರು ಬುಧವಾರ (ಸೆ. 7) ಸಂಜೆ 5 ಗಂಟೆಗೆ ನಾನಾ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರ ಹಾಗೂ ಪ್ರತಿನಿಧಿಗಳ ಸಭೆ ಕರೆದಿದ್ದರು.


ಮಹದೇವಪುರ(Mahadevapura) ಭಾಗದ ಸರ್ಜಾಪುರ, ಇಕೋ ಸ್ಪೇಸ್‌, ವೈಟ್‌ಫೀಲ್ಡ್‌, ಮಾರತಹಳ್ಳಿ, ಕುಂದಲಹಳ್ಳಿ, ಹೋಪ್‌ ಫಾರಂ ಸೇರಿದಂತೆ ಹಲವು,

ಭಾಗಳಲ್ಲಿ ತೀವ್ರ ಮಳೆಯಿಂದಾಗಿ ಐಟಿ-ಬಿಟಿ (IT-BT) ಕಂಪನಿಗಳ ಕಾರ್ಯನಿರ್ವಹಣೆಗೆ ತೀವ್ರ ಅಡಚಣೆಯಾಗಿತ್ತು. ಈ ಬಗ್ಗೆ ಐಟಿ ಉದ್ಯಮಿಗಳು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್‌ಗಳನ್ನೂ ಮಾಡಿದ್ದರು.

ಇದನ್ನೂ ಓದಿ : https://vijayatimes.com/easy-tips-to-get-a-good-sleep/

ಇದರಿಂದ ಎಚ್ಚೆತ್ತ ಐಟಿ-ಬಿಟಿ ಸಚಿವ ಅಶ್ವತ್ಥ ನಾರಾಯಣ, ವಿಧಾನಸೌಧದಲ್ಲಿ ಬುಧವಾರ ಸಂಜೆ ಐಟಿ-ಬಿಟಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ನಾಸ್ಕಾಂ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ, ಉದ್ಯಮಿಗಳ ಅಹವಾಲುಗಳನ್ನು ಆಲಿಸಿದ ಅವರು, “ಬೆಂಗಳೂರು ಬ್ರಾಂಡ್ ಅನ್ನು ಎಲ್ಲರೂ ಸೇರಿ ಉಳಿಸೋಣ.

ಇದಕ್ಕೆ ಅಪಕೀರ್ತಿ ತರುವುದು ಬೇಡ. ಉದ್ಯಮಿಗಳ ಸಮಸ್ಯೆಗಳನ್ನು ಆಲಿಸಲು ಇನ್ನುಮುಂದೆ ಪ್ರತೀ ತಿಂಗಳೂ ವರ್ಚುಯಲ್ ಸಭೆ ನಡೆಸಲಾಗುವುದು” ಎಂದರು.

ಹಾಗೆಯೇ, “ಮುಂದಿನ ಮಳೆಗಾಲದ ವೇಳೆಗೆ ಐಟಿ ಕಂಪನಿಗಳ ತಾಣ ಎಂದೇ ಪ್ರಸಿದ್ಧವಾಗಿರುವ ಮಹದೇವಪುರ ವಲಯದ ಭಾಗದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುತ್ತೇವೆ” ಎಂದು ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/fans-fight-at-asia-cup-cricket-match/


ಅದೇ ರೀತಿ, ಸರಕಾರವು ಐಟಿ-ಬಿಟಿ ಕಂಪನಿಗಳ ಅಹವಾಲುಗಳನ್ನು ಕೇಳಿ, ಅವುಗಳನ್ನು ಪರಿಹರಿಸಲೆಂದೇ ವಿಷನ್ ಗ್ರೂಪ್‌ಗಳನ್ನು ರಚಿಸಿದೆ.

ಇದಕ್ಕೆ ಐಟಿ ಕಂಪನಿಗಳನ್ನು ನಡೆಸಿದ ಅನುಭವವಿರುವವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಸರಕಾರದ ಸ್ಪಂದನಶೀಲತೆಗೆ ಇದಕ್ಕಿಂತ ನಿದರ್ಶನ ಬೇಕಾಗಿಲ್ಲ ಎಂದು ಅಶ್ವತ್ಥನಾರಾಯಣ ವಿವರಿಸಿದರು.


ಇದೇ ಸಂದರ್ಭದಲ್ಲಿ ಮಾತನಾಡಿದ ಐಟಿ ವಿಷನ್ ಗ್ರೂಪ್ (Vision Group) ಮುಖ್ಯಸ್ಥ ಕ್ರಿಸ್‌ ಗೋಪಾಲಕೃಷ್ಣನ್, “ಬೆಂಗಳೂರು ಬ್ರಾಂಡ್ ಎಲ್ಲಿಗೂ ಹೋಗುವುದಿಲ್ಲ.

ಇಂತಹ ಮಹಾಮಳೆ ಬಂದರೆ ಎಂತಹ ನಗರವಾದರೂ ಸ್ತಬ್ಧವಾಗುತ್ತದೆ. ಶೇ. 80ಕ್ಕಿಂತ ಹೆಚ್ಚಿನ ಭಾಗಕ್ಕೆ ಇಲ್ಲಿ ಏನೂ ಆಗಿಲ್ಲ. ಮಹದೇವಪುರದ ಭಾಗದಲ್ಲಿ ಆಗಿರುವ ಹಾನಿ ಅನಿರೀಕ್ಷಿತ. ಇದರಿಂದ ಐಟಿ ಕಂಪನಿಗಳು ಧೃತಿಗೆಡಬಾರದು.

https://fb.watch/fcoxjpNR0u/ –

ಸರಕಾರ ಸದಾ ನಿಮ್ಮೊಂದಿಗಿರುತ್ತದೆ” ಎಂದರು. ಇದಕ್ಕೆ ಸ್ಪಂದಿಸಿದ ಐಟಿ ಕಂಪನಿಗಳ ಪ್ರಮುಖರು ಕೂಡ, “ನಮಗ್ಯಾರಿಗೂ ಬೆಂಗಳೂರನ್ನು ಬಿಟ್ಟು ಹೋಗುವ ಮನಸ್ಸಿಲ್ಲ.

ಮಳೆಯಿಂದ ಉಂಟಾಗಿರುವ ಸಮಸ್ಯೆ ಮತ್ತು ನಷ್ಟವನ್ನು ಸರಕಾರದ ಗಮನಕ್ಕೆ ತರುವುದಷ್ಟೇ ನಮ್ಮ ಬಯಕೆಯಾಗಿದೆ. ಸರಕಾರದ ಸ್ಪಂದನದಿಂದ ನಮಗೂ ಸಮಾಧಾನವಾಗಿದೆ” ಎಂದರು.


ಇದೇ ಸಂದರ್ಭದಲ್ಲಿ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಸಾದರಪಡಿಸಿ, ಇವುಗಳನ್ನು ಬಗೆಹರಿಸಲು ಸರ್ಕಾರವು ಕೈಗೊಂಡಿರುವ ಉಪಕ್ರಮಗಳನ್ನು ಗಮನಕ್ಕೆ ತಂದರು.
Exit mobile version