ಬೆಂಗಳೂರು ಆ 24 : ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿದ್ದ ಕನ್ನಡದ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ಸೇವಿಸಿರುವುದು FSL ವರದಿಯಲ್ಲಿ ಧೃಡಪಟ್ಟಿದೆ.
2020ರ ಸೆಪ್ಟೆಂಬರ್ 14 ರಂದು ರಾಗಿಣಿಯನ್ನು ಡ್ರಗ್ಸ್ ಪ್ರಕರಣದಲ್ಲಿ ರಾಗಿಣಿ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು . ನಂತರ ನವೆಂಬರ್ ತಿಂಗಳಿನಲ್ಲಿ ರಾಗಿಣಿ ಅವರು ಬೇಲ್ ಗೆ ಅರ್ಜಿ ಸಲ್ಲಿಸಿದ್ದರು ಆದರೆ ಕರ್ನಾಟಕ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು . ಅದನ್ನ ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ರಾಗಿಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.
ರಾಗಿಣಿ ಮಾತ್ರವಲ್ಲದೆ ಈ ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಕೂಡ ಬಂಧಿತರಾಗಿದ್ದರು ಅವರೂ ಕೂಡ ಮೂರು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅದರೆ 3 ತಿಂಗಳ ಬಳಿಕ ಸಂಜನಾ ಗಲ್ರಾನಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು ಆದರೆ ನಂತರ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ನೀಡಿತ್ತು .
ಆದರೆ ಇದೀಗ ಸುಮರು 10 ತಿಂಗಳ ಬಳಿಕ FSLಯ ವರದಿಯ ಪ್ರಕಾರ ಈ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿರುವುದು ದೃಡ ಪಟ್ಟಿದ್ದು, ಈ ಹಿನ್ನಲೆಯಲ್ಲಿ ಇಬ್ಬರೂ ಕೂಡ ಮತ್ತೆ ಜೈಲುಪಾಲಾಗುವ ಸಾಧ್ಯತೆಯಿದೆ.