ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ ಸೇರಿ 8 ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು ಸೆ 24 :  ವಿಧಾನ ಸಭೆಯಲ್ಲಿ ಅಂಗೀಕೃತ ರೂಪದಲ್ಲಿ‌ದ್ದ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ ಸೇರಿದಂತೆ ಒಟ್ಟು ಎಂಟು ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ 2020-21, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ, ಕರ್ನಾಟಕ ಪೌರ ಸಭೆಗಳು ಮತ್ತು ಇತರ ಕೆಲವು ಕಾನೂನು ವಿಧೇಯಕಗಳು, ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳಿಗೆ ಸಂಬಂಧಿಸಿದಂತಹ ವಿಧೇಯಕಗಳಿಗೆ ಹಾಗೂ ಕರ್ನಾಟಕ ಧನ ವಿನಿಯೋಗ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಗಳಿಗೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ.

ಹಾಗೆಯೇ ರಾಜ್ಯದ‌ಲ್ಲಿ ಜೂಜಾಟವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಈ ಹಿಂದೆ ವಿಧಾನಸಭೆ‌ಯಲ್ಲಿ ಅಂಗೀಕೃತ‌ವಾಗಿತ್ತು‌‌. ಈ ತಿದ್ದುಪಡಿ ಇದೀಗ ಮೇಲ್ಮನೆಯಲ್ಲಿ‌ಯೂ ಅಂಗೀಕಾರ‌ಗೊಂಡಿದೆ.

Exit mobile version