Bengaluru : ಬೆಂಗಳೂರಿನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಬ್ಬರು ವಿದ್ಯಾರ್ಥಿಗಳು ‘ಪಾಕಿಸ್ತಾನ್ ಜಿಂದಾಬಾದ್'(Bengaluru Students Detained) ಘೋಷಣೆ ಕೂಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೆಂಗಳೂರಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ(Bengaluru Students Detained) ವಿರುದ್ಧ ಸದ್ಯ ಪ್ರಕರಣ ದಾಖಲಾಗಿದೆ.

ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಇಬ್ಬರು ಯುವಕರು, ಕಾಲೇಜಿನಲ್ಲಿ ಆಯೋಜಿಸಿದ್ದ ಇಂಟರ್ ಕಾಲೇಜು ಫೆಸ್ಟ್ನಲ್ಲಿ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಐಪಿಎಲ್(IPL) ಕ್ರಿಕೆಟ್ ತಂಡಗಳ ಘೋಷಣೆಗಳನ್ನು ಕೂಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಐಪಿಎಲ್ ಕ್ರಿಕೆಟ್ ತಂಡಗಳ ಹೆಸರನ್ನು ಕೂಗುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಇಬ್ಬರು ವಿದ್ಯಾರ್ಥಿಗಳು ಒಬ್ಬ ಹುಡುಗ ಮತ್ತು ಹುಡುಗಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗಿದ್ದಾರೆ.
ಇವರಿಬ್ಬರ ಘೋಷಣೆಯನ್ನು ಆಲಿಸಿದ ಇತರ ವಿದ್ಯಾರ್ಥಿಗಳು ಕೂಡಲೇ ಅವರಿಗೆ ಕ್ಷಮೆಯನ್ನು ಕೇಳಲು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : https://vijayatimes.com/health-tips-of-pomegranate/
ವಿದ್ಯಾರ್ಥಿಗಳ ಗುಂಪು ಇವರಿಬ್ಬರನ್ನು ಕ್ಷಮೆ ಕೇಳಲು ಹೇಳಿದ ಬೆನ್ನಲ್ಲೇ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿ ಈ ಘಟನೆಯನ್ನು ವಿಡಿಯೋ ರೆಕಾರ್ಡ್ ಮಾಡಿ ತನ್ನ ಇನ್ಸ್ಟಾಗ್ರಾಮ್ನಲ್ಲಿ(Instagram) ಅಪ್ಲೋಡ್ ಮಾಡಿದ್ದಾನೆ. ವಿಡಿಯೋ ವೈರಲ್ ಆಗಿದ್ದು, ಕಾಲೇಜು ಆಡಳಿತ ಮಂಡಳಿ ವಿಚಾರಣೆ ನಡೆಸಿ ಇಬ್ಬರಿಂದ ಕ್ಷಮಾಪಣೆ ಪತ್ರ ಪಡೆದು ಅಮಾನತು ಮಾಡಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 505(1)ಬಿ (ಸಾರ್ವಜನಿಕರಿಗೆ ಭಯ ಉಂಟು ಮಾಡುವ ಉದ್ದೇಶದಿಂದ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಪ್ರಕರಣದ ಬಗ್ಗೆ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಘೋಷಣೆ ಬಗ್ಗೆ ಪ್ರಶ್ನಿಸಿದಾಗ, ಯುವಕ ಮತ್ತು ಯುವತಿ ನಾವು ತಮಾಷೆಯಾಗಿ ಹೇಳಿದ್ದು ಎಂಬ ಕಾಟಾಚಾರ ಹೇಳಿಕೆ ನೀಡಿದ್ದಾರೆ. ಪೊಲೀಸರು ಯುವಕ ಹಾಗೂ ಯುವತಿ ಇಬ್ಬರ ಕಾಲೇಜಿನ ಐಡಿ, ಆಧಾರ್ ಕಾರ್ಡ್ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
https://fb.watch/gTbIAkIsD_/ COVER STORY | ಭರ್ಜರಿ ಆಯಿಲ್ ಮಾಫಿಯಾ
ಸದ್ಯ ಮಾರತಹಳ್ಳಿ ಪೊಲೀಸರು(Marathahalli Police) ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು, ಈ ಇಬ್ಬರು ವಿದ್ಯಾರ್ಥಿಗಳ ಪೋಷಕರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.