Bengaluru: ಇನ್ನೇನು ಮಳೆಗಾಲ (Rainy Season) ಆರಂಭವಾಗುತ್ತದೆ ವಿದ್ಯುತ್ ಸಮಸ್ಯೆ ಆರಂಭವಾಗುತ್ತದೆ ಎಂದೆಲ್ಲಾ ತಲೆಕೆಡಿಸಿಕೊಳ್ಳುವುದೇ ಬೇಡ. ಏಕೆಂದರೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕೆಂದೇ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ (WhatsApp Number) ಬಿಡುಗಡೆ ಮಾಡಲಾಗಿದೆ.
ಇನ್ನು ಈ ಕುರಿತಾಗಿ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್ ಕಂಬಗಳು ಮುರಿದು, ವಿದ್ಯುತ್ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ (Bescom Helpline) 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದೆ. ಮುಂಬರುವ ದಿನಗಳಲ್ಲಿ ಮಳೆಯಿಂದಾಗಿ ಉಂಟಾಗುವ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ.
ಈ ವಾಟ್ಸ್ಆಪ್ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಾಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿದರೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಬೆಸ್ಕಾಂಗೆ ಸಹಾಯವಾಗಲಿದೆ. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಈ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021 ಈ ಮೇಲಿನ ನಂಬರ್ ಗಳಿಗೆ ವಿದ್ಯುತ್ ಸಮಸ್ಯೆಗಳಿಗೆ ಕರೆ ಮಾಡಬಹುದಾಗಿದೆ.
ಇದಲ್ಲದೆ, ಎಸ್ ಎಂಎಸ್ (SMS) ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ. 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119 ಗಳನ್ನು ಕೇವಲ ಎಸ್ಎಂಎಸ್ ಗಳಿಗೆ ಮಾತ್ರ ಮೀಸಲಿಡಲಾಗಿದೆ.