ಭ್ರಷ್ಟಾಚಾರ ಆರೋಪದಡಿ ಆರೋಗ್ಯ ಸಚಿವರನ್ನು ವಜಾಗೊಳಿಸಿದ ಸಿಎಂ ಭಗವಂತ್ ಮಾನ್!

Punjab

ಪಂಜಾಬ್(Punjab) ಮುಖ್ಯಮಂತ್ರಿ(Chiefminister) ಭಗವಂತ್ ಮಾನ್(Bhagvanth Mann) ಅವರು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ(Corruption) ಆರೋಪದ ಮೇಲೆ ರಾಜ್ಯ ಸಂಪುಟದಿಂದ ವಜಾಗೊಳಿಸಿರುವುದಾಗಿ ಮಂಗಳವಾರ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಅವರ ಪದಚ್ಯುತಗೊಳಿಸಿದ ನಂತರ, ಸಿಂಗ್ಲಾ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ ಬಂಧಿಸಿದೆ. ನಾನು ಆ ಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇನೆ, ಅವರನ್ನು ಸಂಪುಟದಿಂದ ವಜಾಗೊಳಿಸಿದ್ದೇನೆ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ. ಆರೋಗ್ಯ ಸಚಿವರಾಗಿದ್ದ ವಿಜಯ್ ಸಿಂಗ್ಲಾ ಅವರು ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಅದನ್ನು ಒಪ್ಪಿಕೊಂಡಿದ್ದಾರೆ.

ಎಎಪಿ ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು ನೀತಿ ಜಾರಿಮಾಡಿದೆ ಎಂದು ಭಗವಂತ್ ಮಾನ್ ಹೇಳಿದರು. ಸಚಿವರ ವಿರುದ್ಧ ಕಠಿಣ ಕ್ರಮ ಜಾರಿ ಮಾಡಿದ್ದೇವೆ ಮತ್ತು ಅವರನ್ನು ಸಂಪುಟದಿಂದ ಕೈಬಿಡುತ್ತಿದ್ದೇವೆ ಎಂದು ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಟೆಂಡರ್‌ಗಾಗಿ ಸಚಿವರು ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದ ಕೂಡಲೇ ಭಗವಂತ್ ಮಾನ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದರು.

ಸಿಂಗ್ಲಾ ತಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಮನ್ ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Exit mobile version