Bangalore: ಮಾಜಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ರಾಜ್ಯ ಆಮ್‌ಆದ್ಮಿ ಪಕ್ಷ ಉಪಾಧ್ಯಕ್ಷ ಭಾಸ್ಕರ್‌ರಾವ್(Bhaskar Rao)ಅವರು ಎಎಪಿ (AAP)ಪಕ್ಷವನ್ನು ತೊರೆದು ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ. ಭಾಸ್ಕರ್‌ರಾವ್ ಪಕ್ಷ ತೊರೆದಿರುವುದು (bhaskar rao to bjp) ಎಎಪಿಗೆ ಭಾರೀ ಆಘಾತವನ್ನೇ ನೀಡಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಕೆ.ಅಣ್ಣಾಮಲೈ(K.Annamalai),
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಸುದಿ ರ್ಘ ಚರ್ಚೆ ನಡೆಸಿದ್ದಾರೆ.
ಇದಾದನಂತರ ರಾಜ್ಯ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪದ್ಮನಾಭನಗರದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ಭಾಸ್ಕರ್‌ರಾವ್(Bhaskar Rao) ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
ಸದ್ಯ ಬಸವನಗುಡಿ ಕ್ಷೇತ್ರದಲ್ಲಿ ರವಿ ಸುಬ್ರಹ್ಮಣ್ಯ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ರವಿ ಸುಬ್ರಹ್ಮಣ್ಯ ಸತತ ಮೂರು ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
ಆದರೆ ಕುಟುಂಬ ರಾಜಕೀಯ ಮತ್ತು ಸ್ವಪಕ್ಷೀಯರ ಅಸಮಾಧಾನದಿಂದಾಗಿ ಈ ಬಾರಿ ರವಿ ಸುಬ್ರಹ್ಮಣ್ಯ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗಿದೆ.
ರವಿ ಸುಬ್ರಹ್ಮಣ್ಯ(Ravi Subrahmanya) ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರಿಗೂ (bhaskar rao to bjp) ಟಿಕೆಟ್ ನೀಡುವುದು ತಪ್ಪು ಸಂದೇಶ ನೀಡುತ್ತದೆ. ಹೀಗಾಗಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿದೆ.
ಹೀಗಾಗಿಯೇ ಭಾಸ್ಕರ್‌ರಾವ್ ಅವರು ಬಸವನಗುಡಿ ಕ್ಷೇತ್ರದ ಮೇಲೆ ಕಣ್ಣಿಟ್ಟು ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂದು ಅಮಿತ್‌ಶಾ ನೀಡಿರುವ ಟಾಸ್ಕ್ ಅನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಯಕರು,
ಬೇರೆ ಪಕ್ಷಗಳ ಪ್ರಬಲ ನಾಯಕರನ್ನು ಪಕ್ಷಕ್ಕೆ ಕರೆತರುವ ತಂತ್ರವನ್ನು ಹೆಣೆದಿದ್ದಾರೆ.
ಅದರ ಭಾಗವಾಗಿ ಭಾಸ್ಕರ್ ರಾವ್ ಅವರನ್ನು ಬಿಜೆಪಿ ಸೆಳೆದಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Aravind Kejriwal) ಅವರು ಕರ್ನಾಟಕಕ್ಕೆ ಮಾರ್ಚ್ 4ರಂದು ಭೇಟಿ ನೀಡುತ್ತಿದ್ದು,
ಈ ಸಂದರ್ಭದಲ್ಲಿ ಅಪರೇಷನ್ ಕಮಲ ನಡೆಸುವುದಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಭಾಸ್ಕರ್ ರಾವ್ ಅವರು ಬಿಜೆಪಿ ಸೇರ್ಪಡೆಗೆ ಬಿಜೆಪಿ ಕೇಂದ್ರ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ಮಾಜಿ ಐಪಿಎಸ್ ಅಧಿಕಾರಿ ಮುಂದಾಗಿದ್ದಾರೆ.
ಮತ್ತೊಂದು ಕಡೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ರಾಜ್ಯ ಬಿಜೆಪಿ ಕಚೇರಿಯಲ್ಲಿದ್ದ ಕಾರಣ ಅವರನ್ನು ಭೇಟಿ ಮಾಡಲು ಭಾಸ್ಕರ್ ರಾವ್ ಬಿಜೆಪಿ ಕಚೇರಿ ಭೇಟಿ ನೀಡಿದ್ದರು ಎಂಬ ಮಾತು ಕೂಡಾ ಕೇಳಿ ಬಂದಿದೆ.