ಹೊಸದಿಲ್ಲಿ, ಫೆ. 22: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಆರು ತಿಂಗಳು ಕಾಲ ಜಾಮೀನು ಮಂಜೂರು ಮಾಡಿ ಸೋಮವಾರ ಆದೇಶ ಹೊರಡಿಸಿದೆ.
82 ವರ್ಷ ವಯಸ್ಸಿನ ರಾವ್ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ವಿಚಾರಣಾಧೀನ ಆರೋಪಿಯ ಸ್ಥಿತಿಯನ್ನು ನೋಡಿಯೂ ಅವರನ್ನು ಜೈಲಿಗೆ ಕಳುಹಿಸುವುದು ಸೂಕ್ತವಲ್ಲ ಎಂದು ನ್ಯಾಯಾಲಯ ಆದೇಶ ಹೊರಡಿಸುವಾಗ ಹೇಳಿದೆ.
ಕೆಲವು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ವಿಶೇಷ ನ್ಯಾಯಾಲಯ ವ್ಯಾಪ್ತಿಯಲ್ಲಿ ರಾವ್ ಇರಬೇಕು, ಎಫ್ಐಆರ್ಗೆ ಕಾರಣವಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು, ಅಗತ್ಯವಿದ್ದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಹೇಳಿದೆ.
[BREAKING] Bombay High Court grants bail to Bhima Koregaon accused Dr. Varavara Rao for six months #BhimaKoregaon #VaravaraRao #BombayHighCourt
— Bar & Bench (@barandbench) February 22, 2021
Read full story – https://t.co/hvdja4aKxd pic.twitter.com/RjVdcykl9F