ದೆಹಲಿಗೆ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಬಂಧಿಸಿದ ಭೋಪಾಲ್ ಪೋಲಿಸರು.

Hubli: ದೆಹಲಿ (Delhi)ಯಲ್ಲಿ ಮಂಗಳವಾರ ಫೆ.13 ರಂದು ನಡೆಯಲಿರುವ ಕಿಸಾನ್ ಮೋರ್ಚಾ (Bhopal Police Arrested Kar Farmers) ಕಾರ್ಯಕ್ರಮದಲ್ಲಿ ಭಾಗಿಯಾಗಿ

ಪ್ರತಿಭಟನೆ (Delhi Farmers Protest) ನಡೆಸಲು ಹೋಗುತ್ತಿದ್ದ ಚಾಮರಾಜನಗರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ 70 ಮಂದಿ ರೈತರನ್ನು (Karnataka

Farmers) ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್

(Kurubur Shanthakumar) ನೇತೃತ್ವದಲ್ಲಿ ರೈತರು (Bhopal Police Arrested Kar Farmers) ದೆಹಲಿಗೆ ತೆರಳುತ್ತಿದ್ದರು.

ಇನ್ನು ದೆಹಲಿಯ‌ ಜಂತರ್​ ಮಂತರ್​​ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ (Kisan Morcha) ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ

ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು (Nijamuddin Express Train) ಮೂಲಕ ತೆರಳುತ್ತಿದ್ದರು. ಅದನ್ನು ತಿಳಿದು ಕರ್ನಾಟಕದ ರೈತರನ್ನು

ಬಂಧಿಸಿ ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿದೆ. ಅಲ್ಲಿಯೇ ‘ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.

ಇನ್ನು ರೈತರನ್ನು ಕಿಸಾನ್ ಮೋರ್ಚಾ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ಭೋಪಾಲ್‌ನಲ್ಲಿ (Bhopal) ಬಂಧಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲಿನ ಸರ್ಕಾರದ

ಕ್ರಮವನ್ನು ರೈತರು, ಕಾಂಗ್ರೆಸ್‌ ನಾಯಕರು ಸೇರಿದಂತೆ ಹಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಹ ತಮ್ಮ ಸೋಷಿಯಲ್‌

ಮೀಡಿಯಾದಲ್ಲಿ (Social Media) ಅಸಮಾಧಾನವನ್ನು ಹೊರಹಾಕಿದ್ದು, ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ,

ಪಿಂಚಣಿ ಮತ್ತು ವಿಮಾ ಯೋಜನೆಗಳಿಗೆ ಖಾತರಿ ನೀಡುವ ಕಾನೂನನ್ನು ರೂಪಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಮುನ್ನಚ್ಚರಿಕಾ ಕ್ರಮವಾಗಿ ಹರಿಯಾಣ ಸರ್ಕಾರ ಏಳು

ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ (Mobile Internet) ಸಂಪರ್ಕವನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮಂಗಳವಾರ ರಾತ್ರಿಯವರೆಗೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್,

ಜಿಂದ್, ಹಿಸಾರ್, ಫತೇಹಾಬಾದ್ (Kaithal, Jind, Hisar, Fatehabad) ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನು ಓದಿ : ಕರ್ನಾಟಕದ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ: ರಾಜ್ಯಪಾಲ ಗೆಹ್ಲೋಟ್

Exit mobile version