- ಅಧ್ಯಕ್ಷ ಎಸ್.ರವಿಕುಮಾರ್ ವಿರುದ್ಧ ಕಮಿಷನ್ ವಸೂಲಿ ಆರೋಪ
- ಫಲಾನುಭವಿಗಳಿಂದ ಶೇಕಡಾ 60 ರಷ್ಟು ಕಮಿಷನ್ ಆರೋಪ
- ಸಿಎಂ ಸಿದ್ದರಾಮ್ಯಯನವರ ಸೂಚನೆ ಮೇರೆಗೆ ನಿಗಮದ ಅಧ್ಯಕ್ಷ ರಾಜೀನಾಮೆ
ಬೆಂಗಳೂರು: ಕಮಿಷನ್ ವಸೂಲಿ ಆರೋಪದಡಿ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್(S. Ravikumar) ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು(Karnataka State Bhovi Development Corporation) ಭೂ-ರಹಿತ ಕಾರ್ಮಿಕ ಮಹಿಳೆಯರಿಗೆ ಭೂ-ಒಡೆತನ ಯೋಜನೆಯಡಿ ಅನುದಾನ ನೀಡುವುದಾಗಿದೆ.
ಈ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ 60 ಎಕರೆ ಭೂಮಿಯನ್ನು ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಉದ್ದೇಶವಿತ್ತು. ಈ ಯೋಜನೆಯ ಫಲಾನುಭವಿಗಳಿಂದ ಅಧ್ಯಕ್ಷ ಎಸ್.ರವಿಕುಮಾರ್

ಶೇಕಡಾ 40 ರಿಂದ 60 ರಷ್ಟು ಕಮಿಷನ್(Commission) ವಸೂಲಿ ಮಾಡಿದ್ದಾರೆಂಬ ಎಂಬ ಆರೋಪ ಕೇಳಿಬಂದಿತ್ತು, ಈ ಹಿಂದೆ ಮಾತನಾಡಿದ್ದ ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳು ಎಂದು ತಮ್ಮ ಮೇಲಿನ
ಆರೋಪವನ್ನು ತಳ್ಳಿ ಹಾಕಿದ್ದರು. ಈ ಪ್ರಕರಣ ರಾಜಕೀಯವಾಗಿ(Politically) ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.
ಅಂತೆಯೇ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಆರೋಪಕ್ಕೆ ಸಂಭಂದಿಸಿದಂತೆ AI ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ತಮ್ಮ ಮೇಲಿನ ಆರೋಪವನ್ನು ರವಿಕುಮಾರ್ ಅವರು ತಳ್ಳಿ ಹಾಕಿದ್ದಾರೆ.
ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಿರ್ಧರಿಸಿರುವುದಾಗಿ ಅವರು ಹೇಳಿದರು.
ಇದನ್ನು ಓದಿ : ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ: ದಂಡ ಪಾವತಿಸುವ ಮುನ್ನ ಎಚ್ಚರಿಕೆ ಅಗತ್ಯ
ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಏನೆಂಬುದನ್ನು ತಿಳಿಸಿ ತನಿಖೆ ನಡೆಸುವಂತೆ ಮನವಿ ಮಾಡಲಿದ್ದೇನೆ ಎಂದು ಎಸ್.ರವಿಕುಮಾರ್ ತಿಳಿಸಿದ್ದಾರೆ.