ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ

Thimphu: ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ನೆರೆಯ ಭೂತಾನ್ ಗೌರವಿಸಿದೆ. ಎರಡು ದಿನಗಳ ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಭೂತಾನ್ (Bhuthan) ದೊರೆ ಅಲ್ಲಿಯ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋʼ ನೀಡಿ ಗೌರವಿಸಿದ್ದಾರೆ. ಭೂತಾನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋʼ ಪಡೆದ ಮೊದಲ ಭೂತಾನ್ನೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ.

ಇನ್ನು ಇಲ್ಲಿಯವರೆಗೂ ಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋ (Order of Druk Galpo) ಪ್ರಶಸ್ತಿಯನ್ನು ಕೇವಲ ನಾಲ್ವರು ಗಣ್ಯ ವ್ಯಕ್ತಿಗಳಿಗೆ ನೀಡಲಾಗಿದೆ. ಆದರೆ ಪ್ರಧಾನಿ ಮೋದಿ ಅವರು ಭೂತಾನ್ನ ಅತ್ಯುನ್ನತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

ಪ್ರಶಸ್ತಿ ಸಮರ್ಪಣೆ : ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ನನ್ನ ಜೀವನದಲ್ಲಿ ಒಂದು ದೊಡ್ಡ ದಿನವಾಗಿದೆ. ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಈ ಗೌರವವನ್ನು ಸ್ವೀಕರಿಸುತ್ತಿದ್ದೇನೆ. ಇದು ನನಗೆ ಸಿಕ್ಕ ಗೌರವವಲ್ಲ, ಇಡೀ ಭಾರತಕ್ಕೆ ಸಿಕ್ಕಿರುವ ಅತ್ಯುನ್ನತ ಗೌರವವಾಗಿದೆ. ಬೇರೆ ದೇಶದಿಂದ ಪ್ರಶಸ್ತಿಯನ್ನು ಪಡೆದಾಗ ಎರಡೂ ದೇಶಗಳು ಸರಿಯಾದ ಹಾದಿಯಲ್ಲಿವೆ ಎಂಬುದನ್ನು ತೋರಿಸುತ್ತದೆ. ಭಾರತ ಮತ್ತು ಭೂತಾನ್ ದೇಶದ ಬಾಂಧ್ಯವ್ಯ ಹೀಗೆ ಸಾಗಲಿದೆ.

ಎರಡೂ ದೇಶಗಳ ಅನೇಕ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಲಿವೆ. ಭಾರತ (India) ಮತ್ತು ಭೂತಾನ್ ನಡುವಿನ ಸಂಬಂಧ ಪ್ರಾಚೀನ ಮತ್ತು ಸಮಕಾಲೀನವಾಗಿವೆ ಎಂದು ಈ ಗೌರವವನ್ನು 140 ಕೋಟಿ ದೇಶವಾಸಿಗಳಿಗೆ ಪ್ರಧಾನಿ ಮೋದಿ ಅರ್ಪಿಸಿದ್ದಾರೆ.

ಇನ್ನು 2 ದಿನಗಳ ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ (Tshering Tobgay) ಅವರು ಮೋದಿಯವರನ್ನು ʼನನ್ನ ಹಿರಿಯ ಸಹೋದರ ನಿಮಗೆ ಸ್ವಾಗತʼ ಎಂದು ಬಣ್ಣಿಸಿದ್ದಾರೆ.

Exit mobile version