New Delhi: ಕಾಂಗ್ರೆಸ್ ನಾಯಕ, ಕರ್ನಾಟಕದ ಉಪ ಮುಖ್ಯಮಂತ್ರಿ (Big Relief for DKS-SC) ಡಿ ಕೆ ಶಿವಕುಮಾರ್ (D K Shivakumar) ಅವರಿಗೆ ಸುಪ್ರೀಂ
ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ
ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಮೂಲಕ 2018ರ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡಿದೆ. ಇದೇ ಪ್ರಕರಣದಲ್ಲಿ ಡಿಕೆಶಿ ಜೈಲು (Jail) ಪಾಲಾಗಿದ್ದರು.
ಇದೀಗ ಸುಪ್ರೀಂ ಕೋರ್ಟ್ನ (Supreme Court) ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ 2018ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ
ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದೆ. 2017ರ ಆಗಸ್ಟ್ನಲ್ಲಿ ದಿಲ್ಲಿಯಲ್ಲಿರುವ ಅವರ ಫ್ಲಾಟ್ಗಳಲ್ಲಿ ಹಣ ಸಿಕ್ಕಿತ್ತು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್
ವಿರುದ್ಧ ಐಪಿಸಿ ಸೆಕ್ಷನ್ 120 B ಅಡಿಯಲ್ಲಿ (Big Relief for DKS-SC) ಪ್ರಕರಣವನ್ನು ದಾಖಲಿಸಿತ್ತು.
ಈ ಪ್ರಕರಣದಲ್ಲಿ 2019ರಲ್ಲಿ ಶಿವಕುಮಾರ್ ಸುಮಾರು ಮೂರು ತಿಂಗಳ ಕಾಲ ಜೈಲುಪಾಲಾಗಿದ್ದರು. ದೆಹಲಿ ಹೈಕೋರ್ಟ್ (Delhi High court) ಬಳಿಕ ಅವರಿಗೆ ಜಾಮೀನು
ನೀಡಿತ್ತು. ಶಿವಕುಮಾರ್ ಅವರು ತನ್ನ ಬಂಧನವನ್ನು ಬಿಜೆಪಿ ರಾಜಕೀಯ ಸೇಡಿನ ಭಾಗ ಎಂದು ಆರೋಪಿಸಿದ್ದರು ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ
ಎಂದು ಹೇಳಿದ್ದರು.
ಡಿಕೆ ಶಿವಕುಮಾರ್ ಅವರಿಗೆ ಸೇರಿದ ದಿಲ್ಲಿಯ ಅಪಾರ್ಟ್ವೊಂದರಲ್ಲಿ 8.59 ಕೋಟಿ ರೂಪಾಯಿ ನಗದನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಅದರನ್ವಯ ಇಡಿ 2018ರಲ್ಲಿ ಡಿಕೆ
ಶಿವಕುಮಾರ್ ವಿರುದ್ಧ ಪ್ರಕರಣವನ್ನು ದಾಖಲಿಸಿತ್ತು. ಐಪಿಸಿ ಸೆಕ್ಷನ್ 120 ‘ಬಿ’ ಅಡಿಯಲ್ಲಿ ಇಡಿ ದಾಖಲಿಸಿರುವ ಈ ಕ್ರಿಮಿನಲ್ ಪ್ರಕರಣದಿಂದ ತಮ್ಮನ್ನು ದೋಷಮುಕ್ತಗೊಳಿಸಬೇಕು
ಎಂದು ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇದನ್ನು ಓದಿ: ವಿಧಾನಸೌಧದೊಳಗೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಮೊಹಮ್ಮದ್ ಶಫಿ ನಾಶಿಪುಡಿ ಸೇರಿ 3 ಬಂಧನ; ಕುಟುಂಬಸ್ಥರ ಕಣ್ಣೀರು.