Kolar-Chikkaballapura: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತ್ತೀಚೆಗೆ ಹಾಲಿನ ದರವನ್ನು ಏರಿಕೆ ಮಾಡಿ, ಗ್ರಾಹಕರಿಗೆ ಬಿಗ್ ಶಾಕ್ ನೀಡಿತ್ತು. ಇದೀಗ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧೀನ ಸಂಸ್ಥೆಯಾಗಿರುವ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ #Karnataka Milk Federation ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡುವ ಮೂಲಕ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಲಾರ ಚಿಕ್ಕಬಳ್ಳಾಪುರ (Kolar-Chikkaballapura) ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) ತೆಗೆದುಕೊಂಡಿರುವ ಈ ನಿರ್ಧಾರದಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಬೆಲೆಯ ಮೇಲೆ 2 ರೂಪಾಯಿ ಕಡಿತ ಮಾಡಿರುವುದು ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇಂದು ಬೆಳಿಗ್ಗೆಯಿಂದಲೇ ಪರಿಷ್ಟ್ಕತ ದರ ಜಾರಿಗೆ ಬರುವಂತೆ ಕೋಚಿಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಇದಕ್ಕೂ ಮುನ್ನ ಪ್ರತಿ ಲೀಟರ್ ಹಾಲಿಗೆ ರೈತರಿಗೆ 33.40 ರೂಪಾಯಿ ನೀಡಲಾಗುತ್ತಿತ್ತು. ಇದೀಗ ದರ ಕಡಿತ ಮಾಡಿರುವುದರಿಂದ ಹಾಲು ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ. ಇತ್ತೀಚೆಗಷ್ಟೇ ಲೀಟರ್ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದ್ದರೆ, ಇನ್ನೊಂದೆಡೆ ಇದೀಗ ರೈತರಿಗೆ 2 ರೂಪಾಯಿ ದರ ಕಡಿತ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ದರ ಕಡಿತಕ್ಕೆ ಕಾರಣವೇನು? : ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) 2024ರ ಜನವರಿಯಲ್ಲಿ ಪ್ರತಿ ದಿನ 9.65 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿತ್ತು. ಆದರೆ ಜೂನ್ (June) ತಿಂಗಳಿನಿಂದ ಪ್ರತಿ ದಿನ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹೆಚ್ಚುವರಿಯಾಗಿ ಎರಡು ಲಕ್ಷ ಲೀಟರ್ ಹಾಲು ಬರುತ್ತಿರುವುದರಿಂದ, ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ (Cochimul) ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.