400ಕ್ಕೂ ಹೆಚ್ಚು ಜೆಡಿಎಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ: ದಳಪತಿಗಳಿಗೆ ಶಾಕ್ ಕೊಟ್ಟ ಡಿಕೆಶಿ!

Bengaluru: ರಾಜಕೀಯ ನಾಯಕರುಗಳ ಬೂದಿ ಮುಚ್ಚಿದ ಕೆಂಡದಂತಿದ್ದ ಅಸಮಾಧಾನಗಳು ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಗರಿ ಗೆದರಿದೆ. ಹಾಗಾಗಿ ಸದ್ದಿಲ್ಲದೆ ಪ್ರಚಾರದ ಜೊತೆಗೆ ಪಕ್ಷಾಂತರ ಕೂಡ ಹೆಚ್ಚಾಗಿಯೇ ನಡೆಯುತ್ತಿದೆ. ಕರ್ನಾಟಕ (Karnataka) ರಾಜಕೀಯದಲ್ಲಿ ಪ್ರಭಾವಿ ನಾಯಕ ಡಿಸಿಎಂ ಡಿ ಕೆ ಶಿವಕುಮಾರ್ (D K Shivakumar) ರಾತ್ರೋರಾತ್ರಿ ಜೆಡಿಎಸ್ ನಾಯಕರಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಭಾಗ್ಯಗಳ ಘೋಷಣೆಯಿಂದ ಭರ್ಜರಿ ಗೆಲುವು ಕಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ (Congress) ಟಕ್ಕರ್ ಕೊಡಲು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ಗೆ (BJP-JDS) ಕನಕಪುರ ಬಂಡೆ ಚನ್ನಪಟ್ಟಣದಲ್ಲಿ ದೊಡ್ದ ಆಘಾತ ನೀಡಿದ್ದಾರೆ.

ನಿನ್ನೆ ರಾತ್ರಿ ಸದ್ದಿಲ್ಲದೆ ಚನ್ನಪಟ್ಟಣದ ಜೆಡಿಎಸ್ ನಾಯಕರಾದ ಅಕ್ಕೂರು ದೊಡ್ಡಿ ಶಿವಣ್ಣ ಸೇರಿದಂತೆ ಬರೋಬ್ಬರಿ 400ಕ್ಕೂ ಮುಖಂಡರನ್ನು ಡಿ ಕೆ ಶಿವಕುಮಾರ್ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದು ಇದರಿಂದ ಜೆಡಿಸ್ ವರಿಷ್ಠರು ಕಂಗಾಲಾಗಿದ್ದಾರೆ. ಜೆಡಿಎಸ್ ನಾಯಕರಿಗೆ ಪಕ್ಷದ ಶಾಲು, ಧ್ವಜ ನೀಡಿ ಬರಮಾಡಿಕೊಂಡ ಡಿ ಕೆ ಶಿವಕುಮಾರ್ ಬರ ಮಾಡಿಕೊಂಡು ಕುಮಾರಸ್ವಾಮಿ ಹಾಗೂ ದೇವೇಗೌಡರು (Devegowda) ತಮ್ಮ ಕುಟುಂಬದ ಸದಸ್ಯರನ್ನು ಬಿಜೆಪಿಯಿಂದ ಕಣಕ್ಕೆ ಇಳಿಸಿ, ಜೆಡಿಎಸ್ (JDS) ಪಕ್ಷವನ್ನು ಹೇಗೆ ಕಟ್ಟುತ್ತಾರೆ ಇನ್ನು ಮುಂದಿನ ದಿನಗಳಲ್ಲಿ ಈ ಪಕ್ಷ ಇಲ್ಲವಾಗುತ್ತದೆ.

ದೇವೇಗೌಡರು ಪಕ್ಷದ ಅಧಿಕಾರವನ್ನು ಕುಮಾರಸ್ವಾಮಿ (Kumaraswamy) ಅವರಿಗೆ ಕೊಟ್ಟ ಪರಿಣಾಮ ಆ ಪಕ್ಷ ಈ ಸ್ಥಿತಿ ತಲುಪಿದೆ. ಈಗ ತಮ್ಮನ್ನು ಅಧಿಕಾರದಿಂದ ಕೆಳಗೆ ಇಳಿಸಿದವರನ್ನೇ ಕರೆದುಕೊಂಡು ಒಕ್ಕಲಿಗರ ಮಠಕ್ಕೆ ಹೋಗಿದ್ದಾರೆ. ಇವರ ರಾಜಕೀಯ ಸ್ವಾರ್ಥಕ್ಕೆ ಕಾರ್ಯಕರ್ತರು ಏನಾಗಬೇಕು. ಅಧಿಕಾರದಲ್ಲಿ ಇದ್ದಾಗಲೇ ಏನೂ ಮಾಡಿಲ್ಲ ಈಗೇನು ಮಾಡುತ್ತಾರೆ. ಅವರು ದುಡಿದರು, ಹೋರಾಟ ಮಾಡಿದರು ಕೇಳುವರಿಲ್ಲ. ಹಾಗಾಗಿ ಕಳೆದ ಒಂದು ತಿಂಗಳಲ್ಲಿ ಸುಮಾರು ಹತ್ತು ಸಾವಿರ ಕಾರ್ಯಕರ್ತರು ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಇನ್ನು ಚನ್ನಪಟ್ಟಣದವರಿಗೆ (Channapattana) ರಾಜಕಾರಣ ಹೊಸದಲ್ಲ. ಆದರೆ ಇಂದು ನಡೆಯುತ್ತಿರುವ ರಾಜಕಾರಣ ನೋಡಿದರೆ ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು ಎಂದು ಅರ್ಥವಾಗುತ್ತಿಲ್ಲ. ಕುಮಾರಸ್ವಾಮಿ, ಯೋಗೇಶ್ವರ್ ಅವರು ಆಡಿದ್ದ ಮಾತುಗಳು ಒಂದೇ ಎರಡೇ. ಅವರು ಈಗ ಏನಾದರೂ ಮಾಡಿಕೊಳ್ಳಲಿ. ಚನ್ನಪಟ್ಟಣದಲ್ಲಿ ದಳ ಮತ್ತು ಬಿಜೆಪಿ ಒಂದಾಗಲು ಸಾಧ್ಯವೇ ಎಂದು ಡಿ ಕೆ ಶಿವಕುಮಾರ್‌ ಡಿಕೆಶಿ ವಿರುದ್ಧ ಗುಡುಗಿದ್ದಾರೆ.

Exit mobile version