Tirupati: ದೇಶದೆಲ್ಲೆಡೆ ತಿರುಪತಿ ಶ್ರೀವಾರಿ ಲಡ್ಡುವಿಗೆ (Tirupati Srivari Laddu) ವಿಶೇಷ ಸ್ಥಾನವಿದೆ. ತಿರುಮಲಕ್ಕೆ ಬರಲು ಸಾಧ್ಯವಾಗದ ಶ್ರೀವಾರಿ ಭಕ್ತರು ಕೇವಲ ತಿರುಮಲ ಲಡ್ಡು ಪ್ರಸಾದ (Tirumala Laddu Prasada) ಸ್ವೀಕರಿಸಿದರೆ ಭಗವಂತನ ದರ್ಶನ ಪಡೆದಷ್ಟೇ ಆನಂದವಾಗುತ್ತದೆ. ಆದರೆ ಪವಿತ್ರ ಯಾತ್ರಾತಾಣ ತಿರುಪತಿ (Tirupati) ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು (Animal fat) ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾಧಿಕಾರಿಗಳು (CBI investigators) ನಾಲ್ವರು ಪ್ರಮುಖ ಡೈರಿ ಮುಖ್ಯಸ್ಥರ (Dairy chief) ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court)ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ (Hyderabad) ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ (Visakhapatnam CBI) ಎಸ್ಪಿ ಮುರಳೀರಾಂಬ,ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಭೋಲೆ ಬಾಬಾ ಡೈರಿಯ (Bhole Baba Dairy) ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (Vaishnavi Diary) (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (AR Diary) (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಇವರುಗಳು ಲಡ್ಡು ಪ್ರಸಾದ ಕಲಬೆರಕೆ ಹಗರಣದಲ್ಲಿ ಬಂಧಿತರಾಗಿರುವ ಆರೋಪಿಗಳಾಗಿದ್ದಾರೆ.
ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು (SIT officers) ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ತಂಡ ತಿಳಿಸಿದೆ.
ಮೂಲಗಳ ಪ್ರಕಾರ ಆರೋಪಿಗಳನ್ನು ಅಪರಾಧ ಸಂಖ್ಯೆ 470/24 ರ ಅಡಿಯಲ್ಲಿ ಬಂಧಿಸಿ ತಿರುಪತಿ ನ್ಯಾಯಾಲಯಕ್ಕೆ (Tirupati Court) ಹಾಜರುಪಡಿಸಲಾಗಿದೆ. ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳ ಉಲ್ಲಂಘನೆಯಾಗಿರುವುದು ಬಹಿರಂಗವಾಗಿದೆ. ಇದರಲ್ಲಿ ಟೆಂಡರ್ ಪಡೆಯಲು ನಕಲಿ ದಾಖಲೆಗಳು (Fake documents) ಮತ್ತು ಸ್ಟ್ಯಾಂಪ್‌ಗಳನ್ನು (Stamps) ಬಳಸಿರುವುದು ಕೂಡ ಸೇರಿಕೊಂಡಿದೆ. ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯ ತುಪ್ಪ ಪೂರೈಕೆಯ ನಿಯಮಗಳನ್ನು ತಿರುಚಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ಪೂರೈಕೆಯಲ್ಲಿ ಹಲವು ವ್ಯತ್ಯಾಸಗಳು ಮತ್ತು ಸುಳ್ಳು ದಾಖಲೆಗಳನ್ನು (False documents) ನೀಡಿರುವುದು ಕೂಡ ಸಾಬೀತಾಗಿದೆ.