- ಗ್ರೇಟರ್ ಬೆಂಗಳೂರು ಮೂಲಕ ಸಿಲಿಕಾನ್ ಸಿಟಿ ಹೊಸ ರೂಪ
- ಸ್ವಚ್ಛತಾ ಅಭಿಯಾನದ ಮೂಲಕ ಸಾರ್ವಜನಿಕ ವಲಯದಲ್ಲಿ ಕಸ ವಿಲೇವಾರಿ
- ಸ್ವಚ್ಚ ಬೆಂಗಳೂರಿನ ಕನಸು ನನಸು ಮಾಡುವತ್ತ ಸರ್ಕಾರದ ಹೆಜ್ಜೆ
Bengaluru: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು (Greater Bangalore) ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ (Big update Greater Bengaluru) ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ (Garbage disposal) ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ (New form) ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ಹೇಳಿದ್ದಾರೆ.
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ನೀರು ಸರಬರಾಜು (Water supply) ಮತ್ತು ಒಳಚರಂಡಿ ಮಂಡಳಿ (Drainage Board) ವತಿಯಿಂದ 4 ಎಂಎಲ್ ಡಿ ಸಾಮರ್ಥ್ಯದ ಜಲಾಗಾರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಶಂಕುಸ್ಥಾಪನೆ ಮಾಡಿರುವ ಯೋಜನೆ ಸುಮಾರು 30 ಸಾವಿರ (30,000) ಮನೆಗಳು, 2.50 ಲಕ್ಷ ಜನರಿಗೆ ನೀರು ಪೂರೈಸಲಿದೆ.
ಇನ್ನು ಈ ಕ್ಷೇತ್ರದಲ್ಲಿ ರಸ್ತೆಗೆ 130 ಕೋಟಿ, ಮೇಲ್ಸೇತುವೆಗೆ (Flyover) 43 ಕೋಟಿ, 320 ಕೋಟಿ ಇತರೆ ವಾರ್ಡ್ ಅಭಿವೃದ್ಧಿಗೆ, 650 ಕೋಟಿ ವೆಚ್ಚದಲ್ಲಿ ಹೊಸ ಫ್ಲೈಓವರ್, ನಿಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ (Digitize) ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ರವಾನಿಸಲಾಗುವುದು. ಇದನ್ನು ಸದ್ಯದಲ್ಲೇ ದೊಡ್ಡ ಆಂದೋಲನದ (Big movement) ರೀತಿಯಲ್ಲಿ ಮಾಡಲಾಗುವುದು. 50X80 ವಿಸ್ತೀರ್ಣದಲ್ಲಿ ಮನೆ (House in area) ನಿರ್ಮಿಸಲು ಪ್ಲಾನ್ ಅನುಮತಿ (Plan permission) ಪಡೆಯಲು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡಲಾಗುವುದು.
ಗ್ರೇಟರ್ ಬೆಂಗಳೂರು (Greater Bangalore) ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಇದು ಚಾಲನೆಯಾಗಲಿದೆ. ಇದಾದ ತಕ್ಷಣ ಬೆಂಗಳೂರಿನಲ್ಲಿ (Immediately in Bangalore) ಸ್ವಚ್ಛತಾ ಅಭಿಯಾನ ಮಾಡಲಾಗುವುದು. ಪಾಲಿಕೆಯ ಸಹಾಯವಾಣಿ ನೀಡಿ ಬೆಂಗಳೂರಿನಲ್ಲಿ ಎಲ್ಲಿ ಕಸ ಇದೆ ಎಂದು ಸಾರ್ವಜನಿಕರು (Public) ಹೇಳಿದರೂ ಪಾಲಿಕೆ ವತಿಯಿಂದ ಅದನ್ನು ಸ್ವಚ್ಛಗೊಳಿಸಲಾಗುವುದು. ಆಮೂಲಕ ಸ್ವಚ್ಛ ಬೆಂಗಳೂರು ರೂಪಿಸಲಾಗುವುದು ಎಂದು ಹೇಳಿದ್ದಾರೆ.

ನಾವು ಕೊಟ್ಟ ಮಾತಿನಂತೆ ಯೋಜನೆಗಳನ್ನು ನೀಡುತ್ತಾ ಬಂದಿದ್ದೇವೆ. ಕೊಟ್ಟ ಭರವಸೆಗಳನ್ನು ಸರಿಯಾಗಿ ಈಡೇರಿಸಿಕೊಂಡು ಬಂದಿರುವ ಸರ್ಕಾರ (Governmet) ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಈ ಹಿಂದೆ ಬಿಜೆಪಿ (BJP) ಸರ್ಕಾರ ಇದ್ದಾಗ ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ, ಅಚ್ಛೇದಿನ ಕೊಡುತ್ತೇವೆ ಎಂದು ಹೇಳಿದ್ದರಲ್ಲಾ ಕೊಟ್ಟರಾ? ಬಿಜೆಪಿ ಸರ್ಕಾರದಲ್ಲಿ (BJP Govt) ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ, ಆದಾಯ ಪಾತಾಳಕ್ಕೆ ಕುಸಿದ ಕಾರಣ ನಾವು ಈ ಗ್ಯಾರಂಟಿ ಯೋಜನೆ (Guarantee scheme) ನೀಡಿದ್ದೇವೆ.
ಬೆಲೆ ಏರಿಕೆ ಮಧ್ಯೆ ನಿಮ್ಮ ಜೀವನ ಸುಗಮವಾಗಿ ಸಾಗಬೇಕು ಎಂದು ಈ ಯೋಜನೆ ನೀಡಿದ್ದೇವೆ .ಈ ಕ್ಷೇತ್ರದಲ್ಲಿ ಶಾಲೆ (School in the field) , ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಶ್ರೀನಿವಾಸ್ ಅವರು ಹೇಳುತ್ತಿದ್ದರು. ಶಾಸಕರು ಎಲ್ಲಿ ಜಾಗ ಹುಡುಕಿಕೊಡುತ್ತಾರೋ ಅಥವಾ ಹಳೇ ಶಾಲೆಯ ಜಾಗವಿದ್ದರೆ ಅದನ್ನು ಕೊಟ್ಟರೆ ಅಲ್ಲೇ ನೂತನ ಶಾಲೆ ನಿರ್ಮಾಣ ಮಾಡಿಕೊಡಲು ನಮ್ಮ ಸರ್ಕಾರ ಅನುಮತಿ ನೀಡಿದೆ.
ಇದನ್ನು ಓದಿ : http://ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ಆಸ್ಪತ್ರೆ ನಿರ್ಮಾಣಕ್ಕೂ (Hospital construction) ಪಾಲಿಕೆ ವತಿಯಿಂದ ಜಾಗ (Big update Greater Bengaluru) ಹುಡುಕಲಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಭರವಸೆ (D.K. Shivakumar’s promise) ನೀಡಿದ್ದಾರೆ.