ದೇಶದಲ್ಲಿ ಅತ್ಯಾಚಾರ ಹೆಚ್ಚಳ ; ದ್ವೇಷದ ಕಾರಣ 5 ಜನ ಯುವಕರಿಂದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಈ ಹಿಂದೆ ನೀಡಿದ್ದ ದೂರಿನಿಂದ ಕೋಪಗೊಂಡ ಐವರು ವಿದ್ಯಾರ್ಥಿಗಳು ಕೋಚಿಂಗ್ ಕ್ಲಾಸ್ ಮುಗಿಸಿ ಹಿಂದಿರುಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ(Gang Rape) ಎಸಗಿದ ಘಟನೆ ಬಿಹಾರದಲ್ಲಿ(Bihar) ನಡೆದಿದೆ.

ಯುವತಿ ಈ ಹಿಂದೆ ನೀಡಿದ್ದ ದೂರಿನ ಮೇಲೆ ಕೋಪಗೊಂಡ ಐವರು ವಿದ್ಯಾರ್ಥಿಗಳು ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್ ತರಗತಿಗಳಿಂದ ಹಿಂದಿರುಗುತ್ತಿದ್ದಾಗ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಕೂಡ ಅದೇ ಕೋಚಿಂಗ್ ಸೆಂಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಆಕೆ ಕೋಚಿಂಗ್ ಕ್ಲಾಸ್‌ನಿಂದ ಹಿಂದಿರುಗುತ್ತಿದ್ದಾಗ ದ್ವೇಷ ಹೊತ್ತಿಕೊಂಡು ಬಂದಿದ್ದ ಹುಡುಗರು, ಆಕೆಯನ್ನು ಬಲವಂತವಾಗಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಇದುವರೆಗೆ ಮೂವರನ್ನು ಕೂಡಲೇ ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯ ಬಳಿಕ, ಆರೋಪಿಯು ಈ ಹಿಂದೆ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಈ ಬಗ್ಗೆ ಕೋಚಿಂಗ್ ಸೆಂಟರ್ ಮುಖ್ಯಸ್ಥರಿಗೆ ತಿಳಿಸಲಾಗಿತ್ತು ಎಂದು ಯುವತಿಯ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಆದರೆ, ಇನ್ನು ಮುಂದೆ ಆಕೆಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದ ನಂತರವೇ, ಕುಟುಂಬವು ಅದೇ ಕೋಚಿಂಗ್ ಸೆಂಟರ್‌ಗೆ ಯುವತಿಯನ್ನು ಕಳುಹಿಸಲು ನಿರ್ಧರಿಸಿದ್ದಾರೆ.

ದೂರಿನ ಮೇರೆಗೆ ಕೋಪಿತಗೊಂಡ ಆರೋಪಿಗಳು ಸಾಮೂಹಿಕ ಅತ್ಯಾಚಾರಕ್ಕೆ ಯೋಜನೆ ರೂಪಿಸಿ, ಆಕೆಯನ್ನು ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ! ಈ ಬಗ್ಗೆ ಯಾವುದೇ ರಾಜಕಾರಣಿಗಳಾಗಲಿ, ಯಾವುದೇ ಪ್ರಮುಖ ವ್ಯಕ್ತಿಗಳು ಧ್ವನಿ ಎತ್ತದೇ, ಬೇಡದ ಆರೋಪಗಳನ್ನು ಮಾಡಿಕೊಂಡು ಸಮಾಜಕ್ಕೆ ಮಾರಕವಾಗುತ್ತಿದ್ದಾರೆಯೇ ವಿನಃ ಇಂಥಹ ಕಾಮುಕರಿಗೆ ಮರಣದಂಡನೆ ಅಥವಾ ಜೀವನಪೂರ ಮರೆಯಲಾಗದಂತ ಕಠಿಣ ಶಿಕ್ಷೆಯನ್ನು ವಿಧಿಸದೇ ಇರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ!

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.