Visit Channel

ಬೈಕಿಗೆ ಟಿಪ್ಪರ್ ಡಿಕ್ಕಿ ತಾಯಿ-ಮಗು ಸ್ಥಳದಲ್ಲೇ ಸಾವು

ಬೆಂಗಳೂರು ಅ 25 : ನಗರದಿಂದ ಕುಟುಂಬ ಸಮೇತ ತಮಿಳುನಾಡಿಗೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಒಲ್ಡ್ ಏರ್ ಪೋರ್ಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ‌.
ಶ್ರೀದೇವಿ (21), ದೀಕ್ಷಿತ(1) ಮೃತ ತಾಯಿ-ಮಗು. ಘಟನೆಯಲ್ಲಿ ಶಿವಕುಮಾರ್ ಗಾಯಗೊಂಡಿದ್ದಾರೆ. ಕೆ.ಆರ್‌‌.ಪುರ‌ ನಿವಾಸಿಗಳಾದ ಶಿವಕುಮಾರ್ ಮೂಲತಃ ತಮಿಳುನಾಡಿನ ಧರ್ಮಪುರಿ ಮೂಲದವರಾಗಿದ್ದಾರೆ‌.‌ ಇಂದು ಬೆಳಗ್ಗೆ ಊರಿಗೆ ಹೋಗಲು ಶಿವಕುಮಾರ್ ನಿರ್ಧರಿಸಿ ತಮ್ಮ ಬುಲೆಟ್ ಬೈಕಿನಲ್ಲಿ ಪ್ರಯಾಣ ಬೆಳೆಸಿದ್ದರು. ಮಾರತ್ ಹಳ್ಳಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಟಿಪ್ಪರ್ ಲಾರಿ ವೇಗವಾಗಿ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಗುದ್ದಿದೆ. ಪರಿಣಾಮ ರಸ್ತೆಯಲ್ಲಿ ಕೆಳಗೆ ಬಿದ್ದು ರಕ್ತಸ್ರಾವವಾಗಿ ಬಿದ್ದಿದ್ದಾನೆ. ಶ್ರೀದೇವಿ ಹಾಗೂ ದೀಕ್ಷಿತ್ ಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ‌. ಹೆಲ್ಮೆಟ್ ಧರಿಸಿದ್ದರಿಂದ ಶಿವಕುಮಾರ್ ದುರ್ಘಟನೆಯಿಂದ ಪಾರಾಗಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗ ಕಾರಣರಾದ ಟಿಪ್ಪರ್ ಚಾಲಕನನ್ನು ವಶಕ್ಕೆ‌ ಪಡೆದುಕೊಂಡು ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.