Bilkis Bano case ಗುಜರಾತ್ ಸರ್ಕಾರದ ಜತೆಗೆ, ಅಪರಾಧಿಗಳನ್ನು ಕೂಡ ಪ್ರತಿವಾದಿಗಳಾಗಿ ಮಾಡುವಂತೆ ಸೂಚನೆ ನೀಡಿದ ಸುಪ್ರೀಂಕೋರ್ಟ್

2002 ಮಾರ್ಚ್ 3, ಈ ಕರಾಳ ದಿನ ದಾಹೋದ್ ಜಿಲ್ಲೆಯ ಲಿಮ್ಖೇದಾ, ಒಂದು ಅಮಾನವೀಯ ಘಟನೆಗೆ ಸಾಕ್ಷಿಯಾಗಿತ್ತು.

ಬಿಲ್ಕಿಸ್ ಬಾನು(Bilkis Bano case) ಎನ್ನುವ ಮಹಿಳೆಯ ಮೇಲೆ ನಿರ್ದಾಕ್ಷಿಣ್ಯವಾಗಿ ಸಾಮೂಹಿಕ ಅತ್ಯಾಚಾರ(Gang Rape) ನಡೆಸಿದ ಗುಂಪೊಂದು, 14 ಜನರನ್ನು ಹೊಡೆದು ಕೊಂದಿತ್ತು.

ಸಾವಿಗೀಡಾದ ಹದಿನಾಲ್ಕು ಜನರಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಾ ಕೂಡಾ ಇದ್ದಳು.

ಈ ಪ್ರಕರಣ ನಡೆದಾಗ ಬಿಲ್ಕಿಸ್ ಐದು ತಿಂಗಳ ಗರ್ಭಿಣಿಯಾಗಿದ್ದರು. ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ, ಬಿಲ್ಕಿಸ್ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿದಾಗ,

ಈ ಬಗ್ಗೆ ಸಿಬಿಐ(CBI) ತನಿಖೆಗೆ ಸುಪ್ರೀಂ ಕೋರ್ಟ್(SupremeCourt) ಆದೇಶಿಸಿತ್ತು. ಬಿಲ್ಕಿಸ್ ಅವರಿಗೆ ಆರೋಪಿಯಿಂದ ಜೀವ ಬೆದರಿಕೆ ಬಂದಿದೆ ಎಂಬ ದೂರಿನ ಪ್ರಕಾರ 2004 ಆಗಸ್ಟ್ ತಿಂಗಳಲ್ಲಿ ಸುಪ್ರೀಂಕೋರ್ಟ್, ಈ ಪ್ರಕರಣವನ್ನು ಗುಜರಾತಿನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿತ್ತು.

https://fb.watch/f6YP8fRmCc/ ಮಳೆ ಅವಾಂತರ

2008 ಜನವರಿ 21 ರಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ, ಯುಡಿ ಸಾಲ್ವಿ ಅವರು 13 ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದು, ಮುಂಬೈನಲ್ಲಿ ನಡೆದ ಇನ್ ಕ್ಯಾಮೆರಾ ವಿಚಾರಣೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರು.

2017 ಮೇ ತಿಂಗಳಲ್ಲಿ ಬಾಂಬೆ ಹೈಕೋರ್ಟ್ ಕೂಡ ಈ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ನಂತರ, 2019 ರಲ್ಲಿ ಸುಪ್ರೀಂಕೋರ್ಟ್ ಬಿಲ್ಕಿಸ್ ಅವರಿಗೆ 50 ಲಕ್ಷ ಪರಿಹಾರವನ್ನೂ ನೀಡಿತ್ತು.

2002ರ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇದು ಪ್ರಥಮ ಆದೇಶವಾಗಿತ್ತು. “ಇಂತಹ ಘಟನೆಗಳು ಸಂಭವಿಸಬಾರದು,

ಅಕಸ್ಮಾತ್ ಸಂಭವಿಸಿದರೆ ರಾಜ್ಯವು ಪರಿಹಾರ ನೀಡಬೇಕು ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ” ಎಂದು ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಹೇಳಿತ್ತು.


ಈ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ, ಜಸ್ವಂತ್ ನೇಯ್, ಗೋವಿಂದ್ ನೇಯ್, ಶೈಲೇಶ್ ಭಟ್, ರಾಧೇ ಶ್ಯಾಮ್ ಶಾ, ಬಿಪಿನ್ ಚಂದ್ರ ಜೋಷಿ, ಕೇಸರ್ ಬಾಯ್ ವಹೋನಿಯ, ಪ್ರದೀಪ್ ಮೋರ್ದಿಯಾ, ಬಕಾಬಾಯಿ ವಹೋನಿಯಾ, ರಾಜುಬಾಯಿ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನ.

ಇದನ್ನೂ ಓದಿ : https://vijayatimes.com/priyank-kharghe-questions-state-bjp/

ಈ ಹನ್ನೊಂದು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅವರನ್ನು ಸನ್ನಡತೆ ಆಧಾರದಲ್ಲಿ ಗುಜರಾತ್ ಸರ್ಕಾರ(Gujarat Government) ಇವರನ್ನು ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅನೇಕ ಅರ್ಜಿಗಳು ದಾಖಲಾಗಿವೆ.


ಈ ಕುರಿತು, ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ, ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನು ಒಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಸಿಪಿಎಂನ ಸಂಸದೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್ ಮತ್ತು ಪ್ರೊಫೆಸರ್ ರೂಪ್ ರೇಖಾ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದೆ.

Bilkis Bano

“ಗುಜರಾತ್ ನಿಯಮಗಳ ಅಡಿಯಲ್ಲಿ ತಪ್ಪಿತಸ್ಥರು ಸನ್ನಡತೆ ಬಿಡುಗಡೆಗೆ ಅರ್ಹರಾಗಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದು ಮುಖ್ಯವಾದ ಅಂಶವಾಗಿದೆ.

ಅತ್ಯಾಚಾರ ಮತ್ತು ಕೊಲೆ ಆರೋಪಿಗಳು ತಮ್ಮ ಬಿಡುಗಡೆಗೆ ಕೋರಿ ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿ ಸನ್ನಡತೆ ಆಧಾರದಲ್ಲಿ ಬಿಡುಗಡೆ ನೀಡುವ ಮುನ್ನ ಅಧಿಕಾರಿಗಳು ತಮ್ಮ ಬುದ್ದಿ ಉಪಯೋಗಿಸಿದ್ದಾರೆಯೇ ಎಂದು ಪರಿಶೀಲಿಸಬೇಕಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಗುಜರಾತ್ ಸರ್ಕಾರದ ಜತೆಗೆ, ಬಿಡುಗಡೆಯಾದ 11 ಮಂದಿ ಅಪರಾಧಿಗಳನ್ನು ಕೂಡ ಪ್ರತಿವಾದಿಗಳಾಗಿ ಮಾಡುವಂತೆ ಸೂಚನೆ ನೀಡಿದ ಸುಪ್ರೀಂಕೋರ್ಟ್, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
Exit mobile version