ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

Bilkis Bano

ನವದೆಹಲಿ : ಬಿಲ್ಕಿಸ್ ಬಾನೊ(Bilkis Bano) ಪ್ರಕರಣ ಇದೀಗ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ತೀವ್ರ ಒತ್ತಾಯ ಕೇಳಿ ಬರುತ್ತಿದ್ದು, ಇದೀಗ ದೇಶದ ಸುಮಾರು 6000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರು(Historians) ಮತ್ತು ಇತರ ಗಣ್ಯ ವ್ಯಕ್ತಿಗಳು ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ಗೆ(Supremecourt) ಪತ್ರ ಬರೆದಿದ್ದಾರೆ.

ದೇಶದಲ್ಲಿರುವ ಸುಮಾರು 6,000 ಕ್ಕೂ ಹೆಚ್ಚು ಮಾನವ ಹಕ್ಕುಗಳ ಕಾರ್ಯಕರ್ತರು, ಪ್ರಖ್ಯಾತ ಬರಹಗಾರರು, ಇತಿಹಾಸಕಾರರು, ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ. ಇನ್ನು ಸಹೇಲಿ ಮಹಿಳಾ ಸಂಪನ್ಮೂಲ ಕೇಂದ್ರ, ಗಮನ ಮಹಿಳಾ ಸಮೂಹ, ಬೇಬಾಕ್ ಕಲೆಕ್ಟಿವ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ ಸೇರಿದಂತೆ ಪ್ರಮುಖ ಮಹಿಳಾ ಸಂಘಗಳು ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರ(Rape) ಮತ್ತು ಹತ್ಯೆಯ(Murder) ಅಪರಾಧಿಗಳಾದ ರಾಧೇಶ್ಯಾಮ್ ಶಾ, ಜಸ್ವಂತ್ ಚತುರ್ಭಾಯಿ ನಾಯ್, ಕೇಶುಭಾಯಿ ವದನಿಯಾ, ಬಕಾಭಾಯಿ ವಡಾನಿಯಾ, ರಾಜಿಭಾಯಿ ಸೋನಿ, ರಮೇಶ್ಭಾಯ್ ಚೌಹಾಣ್, ಶೈಲೇಶ್ಭಾಯ್ ಭಟ್, ಬಿಪಿನ್ ಚಂದ್ರ ಜೋಶಿ, ಗೋವಿಂದಭಾಯ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋಧಿಯಾ ಅವರನ್ನು ಬಿಡುಗಡೆ ಮಾಡಲು ಗುಜರಾತ್‌ ಸರ್ಕಾರ(Gujarat Government) ನಿರ್ಧರಿಸಿದೆ.

ಆದರೆ ಜನವರಿ 21, 2008 ರಂದು ಮುಂಬೈನ ವಿಶೇಷ ಸಿಬಿಐ(CBI) ನ್ಯಾಯಾಲಯವು ಬಿಲ್ಕಿಸ್ ಬಾನೋ ಅವರ ಕುಟುಂಬದ ಏಳು ಸದಸ್ಯರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ನಂತರ ಈ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿಯಿತು.

Exit mobile version