ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸುದ್ಧಿಯಾಘಿರುವ ಬಿಟ್ ಕಾಯಿನ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
2 ತಿಂಗಳ ಹಿಂದೆ ಜಾಮೀನು ಪಡೆದು ನಾಪತ್ತೆಯಾಗಿದ್ದಂತ ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕಿ ಆಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಇದೀಗ ಬೆಂಗಳೂರಿನ 5 ಸ್ಟಾರ್ ಹೋಟೆಲ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶನಿವಾರ ಮಧ್ಯಾಹ್ನವೂ ಹೋಟೆಲ್ ಸಿಬ್ಬಂದಿ ಜೊತೆ ವಿಷ್ಣುಭಟ್, ಶ್ರೀಕಿ ಗಲಾಟೆ ಮಾಡಿಕೊಂಡಿದ್ರು . ಈ ಬಗ್ಗೆ ಹೋಟೆಲ್ ಸಿಬ್ಬಂದಿ ಜೀವನ್ ಭೀಮಾನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಇದೀಗ ಜೀವನ್ ಭೀಮಾನಗರ ಠಾಣೆಯಲ್ಲಿ ಆರೋಪಿ ಶ್ರೀಕಿ ವಿಚಾರಣೆ ನಡೆಸಲಾಗುತ್ತಿದೆ.
ಡ್ರಗ್ಸ್ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸಿಸಿಬಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದ. ಮತ್ತಷ್ಟು ವೆಬ್ಸೈಟ್ಗಳ ಹ್ಯಾಕ್ಗೆ ಪ್ಲ್ಯಾನ್ ಮಾಡಿರುವುದಾಗಿ ಕೃತ್ಯದ ವಿವರಣೆ ನೀಡಿದ್ದ. ಸಿಸಿಬಿ ಪೊಲೀಸರು ಶ್ರೀಕಿಯನ್ನು ಡ್ರಗ್ಸ್ಕೇಸ್ನಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಆತ ಹಲವು ವೆಬ್ ಸೈಟ್ ಹ್ಯಾಕಿಂಗ್ ಮಾಡುತ್ತಿದ್ದ ವಿಚಾರ ಬಯಲಾಗಿತ್ತು.
ವಿದೇಶಿ ಆ್ಯಪ್ ಸೇರಿದಂತೆ ಸರ್ಕಾರಿ ಆ್ಯಪ್ ಸಹ ಶ್ರೀಕಿ ಹ್ಯಾಕ್ ಮಾಡ್ತಿದ್ದ. ಕೇಸ್ ಸಂಬಂಧ ಸಿಸಿಬಿ, ಶ್ರೀಕಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಯಲಾಗಿತ್ತು. ಈತ ಅಂತಾರಾಷ್ಟ್ರೀಯ ವೆಬ್ಸೈಟ್, ಪೋಕರ್ ಗೇಮ್ ಹಾಗೂ ಕ್ರಿಪ್ಟೋ ಕರೆನ್ಸಿಗಳಾದ ಬಿಟ್ ಕಾಯಿನ್, ವೈಎಫ್ಐ, ಇಥೆರಿಯಂ ಖಾತೆಗಳನ್ನು ಹ್ಯಾಕ್ ಮಾಡಿದ್ದ ಎಂದು ತಪ್ಪೊಪ್ಪಿಕೊಂಡಿದ್ದ. ಅಲ್ಲದೆ ಶ್ರೀಕಿ ಬಳಿ ಇದ್ದ ಸುಮಾರು 9 ಕೋಟಿ ರೂಪಾಯಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿತ್ತು.