Bengaluru : ಸುಪ್ರೀಂಕೋರ್ಟ್ನ (bjp against siddaramaiah) ತ್ರಿಸದಸ್ಯ ಪೀಠವು ಮುಂದಿನ 15 ದಿನ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶ
ಹೊರಡಿಸಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ಈ ಹಿಂದೆ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶದಂದ ಕರ್ನಾಟಕಕ್ಕೆ
ಭಾರೀ ಹಿನ್ನಡೆಯುಂಟಾಗಿದ್ದು, ಇದರ ವಿರುದ್ದ ವಿಪಕ್ಷ ಬಿಜೆಪಿ (BJP) ರಾಜ್ಯ ಸರ್ಕಾರದ (bjp against siddaramaiah) ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ (Tweet) ಮಾಡಿರುವ ರಾಜ್ಯ ಬಿಜೆಪಿ, ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್ನಲ್ಲಿ
ಕರ್ನಾಟಕದ ಪರ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಮಂಡಿಯೂರಿ ಕುಳಿತು ಕನ್ನಡಿಗರ
ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡಲು ಸಿದ್ದರಾಮಯ್ಯರವರ ಸರ್ಕಾರ ಒಪ್ಪಿಕೊಂಡು ಬಂದಿದೆ. ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ,
ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ. “ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎನ್ನುವ ಧೋರಣೆಯ ಮೂಲಕ ಕಾಂಗ್ರೆಸ್ ಸರ್ಕಾರ ಕನ್ನಡನಾಡಿಗೆ
ದ್ರೋಹ ಬಗೆದಿದೆ. ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ.

ತಮ್ಮ ಜವಾಬ್ದಾರಿ, ಅಧಿಕಾರವನ್ನು ಮರೆತ ಸಿದ್ದರಾಮಯ್ಯರವರು ಮಾತೆತ್ತಿದರೆ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶಿಸಬೇಕು ಎನ್ನುತ್ತಾರೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳ
ಪರಿಹಾರಕ್ಕೂ ಅವರು ಮೋದಿಯವರ ಮೊರೆ ಹೋದರೂ ಅಚ್ಚರಿಯಲ್ಲ. ಬಿಕೆ ಹರಿಪ್ರಸಾದ್ ಅವರು ಸಿಎಂ ಬದಲಿಸುವ ಮಾತನಾಡುತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
ಮೂರು ಡಿಸಿಎಂ (DCM) ಸ್ಥಾನಕ್ಕಾಗಿ ಕಿತ್ತಾಟ ಜೋರಾಗಿದೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..! ರಾಜ್ಯ ಸರ್ಕಾರದ ವೈಫಲ್ಯದಿಂದ ಕರ್ನಾಟಕದಲ್ಲಿ ರೈತರ ಅತ್ಮಹತ್ಯೆ ತೀವ್ರಗೊಂಡಿದೆ.
ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..! ಶ್ಯಾಡೋ ಸಿಎಂ ಹಾವಳಿ ಹೆಚ್ಚಾಗಿ, ರಾಜ್ಯದ ಸಚಿವರು ಹಾಗೂ ಅಧಿಕಾರಿಗಳು ಬೇಸತ್ತಿದ್ದಾರೆ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..!
ರಾಜ್ಯದಲ್ಲಿ ಕಮಿಷನ್(Commission) , ಕಲೆಕ್ಷನ್, ವರ್ಗಾವಣೆ ದಂಧೆ ಹೆಚ್ಚಾಗಿದೆ ; ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು..! ಪ್ರಧಾನಿ ಮೋದಿಯವರಿಗೆ ದೇಶ ಮುನ್ನೆಡೆಸುವ
ಜವಾಬ್ದಾರಿ ಇದೆ. ನಿಮಗೂ ರಾಜ್ಯದ ಜವಾಬ್ದಾರಿ ಇದೆ. ಮೊದಲು ನಿಮ್ಮ ಒಳ ಜಗಳದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ, ರಾಜ್ಯದ ಜನರ ಹಿತ ಕಾಪಾಡಲು ಮಾಡಬೇಕಾದ ಕೆಲಸಗಳನ್ನು ಮಾಡಿ,
ಮುಖ್ಯಮಂತ್ರಿ ಸ್ಥಾನದ ಜವಾಬ್ದಾರಿಯನ್ನು ನಿರ್ವಹಿಸಿ ಎಂದು ವಾಗ್ದಾಳಿ ನಡೆಸಿದೆ.
ಇದನ್ನು ಓದಿ: ಕುಕ್ಕರ್ ಹಂಚಿಕೆ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ