“ತಮಿಳುನಾಡಿನ ಬಿಜೆಪಿ ಹಿಂದಿ ಹೇರಿಕೆಯನ್ನು ಒಪ್ಪುವುದಿಲ್ಲ” ಅಮಿತ್ ಶಾಗೆ ಟಾಂಗ್ ಕೊಟ್ಟ ಅಣ್ಣಾಮಲೈ!

amit shah

ತಮಿಳುನಾಡಿನ(Tamilnadu) ರಾಜ್ಯ ಬಿಜೆಪಿ(State BJP) ಘಟಕ ಹಿಂದಿ ಭಾಷೆಯ ಹೇರಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ. ನಮಗೆ ತಮಿಳುನಾಡಿನಲ್ಲಿ ತಮಿಳು(Tamil) ಭಾಷೆಯೇ(Language) ಶ್ರೇಷ್ಠ ಎನ್ನುವ ಮೂಲಕ ತಮಿಳುನಾಡಿನ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ(Annamalai) ಗೃಹ ಸಚಿವ(HomeMinister) ಅಮಿತ್ ಶಾ(AmitShah) ನೀಡಿದ್ದ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯವಾಗಿ ಬಿಜೆಪಿಯೊಂದಿಗೆ ನಾನು ಗುರುತಿಸಿಕೊಂಡಿದ್ದೇನೆ. ರಾಜ್ಯ ಬಿಜೆಪಿ ಅಧ್ಯಕ್ಷನಾಗಿದ್ದೇನೆ. ಹಾಗೆಂದ ಮಾತ್ರಕ್ಕೆ ಹಿಂದಿಯನ್ನು ಒಪ್ಪಲು ಸಾಧ್ಯವಿಲ್ಲ. ಭಾಷೆಯ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟವಾಗಿದ್ದು, ತಮಿಳುನಾಡಿನಲ್ಲಿ ತಮಿಳು ಭಾಷೆಗೆ ನಮ್ಮ ಮೊದಲ ಆದ್ಯತೆ ಎಂದಿದ್ದಾರೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳು ತಮ್ಮ ಪ್ರಾದೇಶಿಕ ಭಾಷೆಯ ಮಹತ್ವವನ್ನು ಅರಿತಿವೆ. ನಮ್ಮ ಭಾಷೆಯೂ ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ಹಿಂದಿ ಭಾಷೆಯ ಮೂಲಕ ಆಕ್ರಮಿಸಲು ಸಾಧ್ಯವಿಲ್ಲ.

ತಮಿಳುನಾಡಿನ ರಾಜ್ಯ ಬಿಜೆಪಿ ಘಟಕವು ಕೂಡಾ ಹಿಂದಿ ಹೇರಿಕೆಯನ್ನು ಒಪ್ಪುವುದಿಲ್ಲ. ಹಿಂದಿ ರಾಷ್ಟ್ರದ ಭಾಷೆಯಲ್ಲ, ಅದು ಉತ್ತರ ಭಾರತದಲ್ಲಿ ಹೆಚ್ಚು ಜನರು ಮಾತನಾಡುವ ಭಾಷೆ ಮಾತ್ರ ಎಂದಿದ್ದಾರೆ. ಇನ್ನು ಇತ್ತೀಚೆಗೆ ನಡೆದ ೩೭ನೇಯ ಸಂಸದೀಯ ಅಧಿಕೃತ ಭಾಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಇಂಗ್ಲಿಷ್ ಭಾಷೆಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನು ಬಳಸಬೇಕೆ ಹೊರತು ಪ್ರಾದೇಶಿಕ ಭಾಷೆಗಳಲ್ಲ ಎನ್ನುವ ಮೂಲಕ ಹಿಂದಿ ಭಾಷೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡುವ ಕುರಿತು ಮಾತನಾಡಿದ್ದರು.

Exit mobile version